10 ಗಂಟೆಯೊಳಗೆ ಕಚೇರಿಗೆ ಬರುವಂತೆ ಸರ್ಕಾರಿ ನೌಕರರಿಗೆ ವಂದಿತಾ ಶರ್ಮಾ ವಾರ್ನಿಂಗ್

ಬೆಂಗಳೂರು,ಜು.26- ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಕಚೇರಿಗಳಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಾರ್ಯ ನಿಷ್ಠೆ ತೋರಲು ಈಗಾಗಲೇ ಸಾಕಷ್ಟು ಸುತ್ತೋಲೆಗಳಲ್ಲಿ ಸೂಚನೆ ನೀಡಿದ್ದರೂ, ಸರ್ಕಾರಿ ನೌಕರರು/ಅಧಿಕಾರಿಗಳಲ್ಲಿ ಸಮಯ ಪ್ರಜ್ಞಾ ಮತ್ತು ಕಾರ್ಯ ನಿಷ್ಠೆಯ ಕೊರತೆ ಎದ್ದು ಕಾಣುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದ್ದು ಸರಿಯಾದ ವೇಳೆಗೆ ಕೆಲಸಕ್ಕೆ ಹಾಜರುವಂತೆ ಸೂಚಿಸಲಾಗಿದ್ದು, […]