ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಭರವಸೆಯ ಪೈಪೋಟಿ

ಬೆಂಗಳೂರು,ಜ.20- ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಸೌಲಭ್ಯವನ್ನು ಮರು ಜಾರಿಗೊಳಿಸುವ ಭರವಸೆ ನೀಡಲು ಚರ್ಚೆಗಳು ನಡೆದಿವೆ. 2006ರ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ಜಾರಿಗೊಳಿಸಲಾದ ಹೊಸ ಪಿಂಚಣಿ ವ್ಯವಸ್ಥೆಯ ಬಗ್ಗೆ ಭಾರೀ ವಿರೋಧಗಳು ವ್ಯಕ್ತವಾಗಿದ್ದು, ಇತ್ತಿಚೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿವೆ. ರಾಜ್ಯಾದ್ಯಂತ ಸರ್ಕಾರಿ ನೌಕರರು ಹಳೆ ಪಿಂಚಣಿ ವ್ಯವಸ್ಥೆಯನ್ನು ಮರುಜಾರಿ ಮಾಡಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಎಲ್ಲಾ ಪಕ್ಷದ ನಾಯಕರಿಗೆ ಮನವಿಗಳನ್ನು ನೀಡುತ್ತಲೇ […]