ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಜಾರಿ ಕುರಿತು ಚರ್ಚಿಸಿ ನಿರ್ಧಾರ : ಸಿಎಂ

ಬೆಳಗಾವಿ,ಡಿ.20- ನಿವೃತ್ತ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಕುರಿತು ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶೂನ್ಯವೇಳೆಯಲ್ಲಿ ಅನೇಕ ಸದಸ್ಯರು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ವಿಷಯ ಪ್ರಸ್ತಾಪಿಸಿ, ಈಗಾಗಲೇ ಸಾವಿರಾರು ನಿವೃತ್ತ ನೌಕರರು ಹಳೆ ಪಿಂಚಣಿಯನ್ನೇ ಮುಂದುವರೆಸಬೇಕೆಂದು ಬೀದಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಬೊಮ್ಮಾಯಿ, ನಿವೃತ್ತ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ […]