ಲಾಕ್‍ಡೌನ್ ಮಾಡುವ ಬಗ್ಗೆ ಸರ್ಕಾರ ಚರ್ಚೆ ನಡೆಸಿಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು,ಜ.12- ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಲಾಕ್‍ಡೌನ್ ಕೊನೆಯ ಅಸ್ತ್ರವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಪರಿಸ್ಥಿತಿಯಲ್ಲಿ ಲಾಕ್‍ಡೌನ್ ಮಾಡುವ ಬಗ್ಗೆ ಸರ್ಕಾರ ಚರ್ಚೆ ನಡೆಸಿಲ್ಲ. ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬುವುದನ್ನು ತಡೆಗಟ್ಟಲು ಕೆಲವು ನಿಬಂಧನೆಗಳನ್ನು ಹಾಕಬಹುದು. ಆದರೆ ಇದಕ್ಕೆ ಲಾಕ್‍ಡೌನ್ ಪರಿಹಾರವಲ್ಲ ಎಂದು ಸ್ಪಷ್ಟಪಡಿಸಿದರು. ಲಾಕ್‍ಡೌನ್ ಮಾಡಲಾಗುತ್ತದೆ ಎಂಬ ಬಗ್ಗೆ ಯಾರೊಬ್ಬರು ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟ ಸಹದ್ಯೋಗಿಗಳು ಮತ್ತು […]