‘ಆಪರೇಷನ್ ಜೆಡಿಎಸ್‍’ಗೆ ದಳಪತಿಗಳ ಸಿದ್ಧತೆ

ಬೆಂಗಳೂರು, ಫೆ.8- ಜೆಡಿಎಸ್‍ನ ಕೆಲವು ಶಾಸಕರು, ಮಾಜಿ ಶಾಸಕರು, ಮುಖಂಡರು ಪಕ್ಷ ತೊರೆಯಲು ಸಿದ್ಧರಾಗಿದ್ದು, ರಾಷ್ಟ್ರೀಯ ಪಕ್ಷಗಳತ್ತ ಮುಖ ಮಾಡಿರುವ ಬೆನ್ನಲ್ಲೇ ಆಪರೇಷನ್ ಜೆಡಿಎಸ್‍ಗೆ ತೆರೆಮರೆಯಲ್ಲಿ ಸಿದ್ಧತೆ ನಡೆದಿದೆ.  ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಸೇರ್ಪಡೆಯಾದ ಬೆನ್ನಲ್ಲೇ ಆಪರೇಷನ್ ಜೆಡಿಎಸ್‍ಗೆ ಚಾಲನೆ ದೊರೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಹಲವು ನಾಯಕರು, ಮುಖಂಡರು ಸಂಪರ್ಕದಲ್ಲಿದ್ದಾರೆ. ಇಬ್ರಾಹಿಂ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ […]