ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ: 4 ದಿನ ಗುಡುಗು ಮಿಂಚು ಸಹಿತ ಮಳೆ

ಬೆಂಗಳೂರು,ಆ.3- ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಆರ್ಭಟಿಸುತ್ತಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದ್ದು, ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಡುಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ದೇವರಕೊಲ್ಲಿ ಹಾಗು ಕೊಯ್ನಾಡು ನಡುವಿನ ರಸ್ತೆ ಬಿರುಕು ಬಿಟ್ಟು, ಖಾಸಗಿ ಹಾಗೂ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಗಡಿಭಾಗವಾದ ಕಲ್ಲುಗುಂಡಿ, ಸಂಪಾಜೆ, ಗೂನಡ್ಕ ಗ್ರಾಮಗಳು ಜಲಾವೃತಗೊಂಡಿವೆ. ಭಾರೀ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಮೈಸೂರು, ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಸುಳ್ಯ […]