ಚಾವ್ಲಾ ಅತ್ಯಾಚಾರ ಪ್ರಕರಣ : ಮೇಲ್ಮನವಿ ಸಲ್ಲಿಸಲು ದೆಹಲಿ ಸರ್ಕಾರ ಸಿದ್ಧತೆ

ನವದೆಹಲಿ, ನ.21- ಚಾವ್ಲಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ದೆಹಲಿ ಸರ್ಕಾರ ಮುಂದಾಗಿದೆ. ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ವಿನೈ ಕುಮಾರ್ ಸಕ್ಸೆನಾ ಅವರು ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸುವ ಪ್ರಕ್ರಿಯೆಗೆ ಅನುಮತಿ ನೀಡಿದ್ದಾರೆ. ಸುಪ್ರೀಂಕೋರ್ಟ್‍ನ ಮುಖ್ಯನ್ಯಾಯಮೂರ್ತಿಯಾಗಿದ್ದ ಉದಯ್ ಕುಮಾರ್ ಲಲಿತ್ ಅವರು ನಿವೃತ್ತರಾಗುವ ಮೊದಲು ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ವಿಭಾಗೀಯ ಪೀಠದಿಂದ ಆದೇಶ ನೀಡಿ, ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿ, ಜೈಲಿನಿಂದ ಬಿಡುಗಡೆ ಮಾಡಲು ಸೂಚಿಸಿದ್ದರು. ತೀರ್ಪು ನೀಡಿರುವ ಸುಪ್ರೀಂಕೋರ್ಟ್ […]

ಆನ್‍ಲೈನ್ ನಲ್ಲಿ ಫುಡ್ ಆರ್ಡರ್ ಮಾಡೋ ಮುನ್ನ ಹುಷಾರ್

ಬೆಂಗಳೂರು, ನ.14- ಆನ್‍ಲೈನ್ ವಂಚನೆಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸೈಬರ್ ಸಂಬಂಧಿತ ಅಪರಾಧಗಳಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡಲು ಹೋಗಿ ಇಂಜಿನಿಯರ್ ಸೇರಿದಂತೆ ನಗರದ ಇಬ್ಬರು ಲಕ್ಷಗಟ್ಟಲೆ ಹಣ ಕಳೆದುಕೊಂಡಿದ್ದಾರೆ. ಬೆಂಗಳೂರಿನ ಇಂಜಿನಿಯರ್ ದೀಪಿಕಾ ಎಂಬುವರು ಫೆಸ್‍ಬುಕ್ ಖಾತೆಯಲ್ಲಿನ ಜಾಹಿರಾತು ನೋಡಿ ಅದರಲ್ಲಿದ್ದ ಫೋನ್ ನಂಬರ್‍ಗೆ ಫುಡ್ ಆರ್ಡ್‍ರ್ ಮಾಡಲು ಕರೆ ಮಾಡಿದ್ದಾರೆ, ಕರೆ ಸ್ವೀಕರಿಸಿದ ವ್ಯಕ್ತಿ ಖಾಂದಾನಿ ರಾಜಧಾನಿ ರೆಸ್ಟೋರೆಂಟ್ ಎಂದು ಪರಿಚಯಿಸಿಕೊಂಡಿದ್ದಾರೆ. ಆರ್ಡರ್ ಬುಕ್ ಮಾಡಲು ನಾವು ಕಳುಹಿಸುವ ಲಿಂಕ್‍ನಲ್ಲಿರುವ […]

ಸಿಇಟಿ ರ‍್ಯಾಂಕಿಂಗ್ ಹೈಕೋರ್ಟ್ ಆದೇಶ ಕುರಿತಾಗಿ ನಾಳೆ ಉನ್ನತ ಶಿಕ್ಷಣ ಇಲಾಖೆ ಸಭೆ

ಬೆಂಗಳೂರು,ಸೆ.4- 2020-21ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಂಕ್ ಪಟ್ಟಿಯನ್ನು ಪ್ರಕಟಿಸುವಂತೆ ಹೈಕೋರ್ಟ್ ನೀಡಿರುವ ಆದೇಶದ ಕುರಿತಾಗಿ ಮುಂದೆ ತೆಗೆದುಕೊಳ್ಳಬೇಕಾದ ಪ್ರಕ್ರಿಯೆಗಳ ಕುರಿತು ನಾಳೆ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಸಭೆ ನಡೆಸಲಿದೆ. ಹೈಕೋರ್ಟ್ ಏಕಸದಸ್ಯ ಪೀಠ ನೀಡಿರುವ ಆದೇಶವನ್ನು ಯಥಾವತ್ತಾಗಿ ಪಾಲನೆ ಮಾಡಬೇಕೆ ಇಲ್ಲವೆ ದಿಸದಸ್ಯ ಪೀಠಕ್ಕೆ ಮೆಲ್ಮನವಿ ಅರ್ಜಿ ಹಾಕಬೇಕೆ ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಅಡ್ವೋಕೇಟ್ ಜನರಲ್ ಮತ್ತು ಕಾನೂನು […]

ಎಡಿಜಿಪಿ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ

ಮಂಗಳೂರು, ಆ.4- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಸರಣಿ ಕೊಲೆಗಳು ನಡೆದ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ಕುಮಾರ್ ಅವರು ಇಂದು ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಉದ್ವಿಗ್ನ ಸ್ಥಿತಿಯಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಸಹಜ ಸ್ಥಿತಿಗೆ ಮರಳುತ್ತಿದ್ದು, ಪರಿಸ್ಥಿತಿ ಅವಲೋಕಿ ಸಲು ಇಂದು ಎಡಿಜಿಪಿ ಅವರು ಸಭೆ ನಡೆಸಿದರು. ಇತ್ತೀಚೆಗೆ ನಡೆದ ಘಟನೆಗಳ ಬಗ್ಗೆ ಅವಲೋಕನ ಮಾಡಲಾಯಿತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಮುಂದೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ […]

BREAKING : ಮದರಸಾಗಳಲ್ಲಿ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಲು ಸೂಚನೆ

ಬೆಂಗಳೂರು,ಜು.18- ದೇಶದ 75ನೇ ಅಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಮದರಸಗಳಲ್ಲೂ ಕಡ್ಡಾಯವಾಗಿ ತಿರಂಗ ಹಾರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಇಲಾಖೆಯಿಂದ ಮತ್ತೊಂದು ಬಾರಿ ಸುತ್ತೋಲೆ ಹೊರಡಿಸಲಿದ್ದು, ಮದರಸಾಗಳು, ಪ್ರೌಢಶಾಲೆ, ಸರ್ಕಾರಿ ಶಾಲೆಗಳು,ಅನುದಾನ, ಅನುದಾನರಹಿತ ಶಾಲೆಗಳು, ಪದವಿ, ಪದವಿಪೂರ್ವ ಕಾಲೇಜುಗಳು, ಅಂಗನವಾಡಿ ಕೇಂದ್ರಗಳಲ್ಲೂ ಕಡ್ಡಾಯವಾಗಿ ತಿರಂಗ ಅಭಿಯಾನವನ್ನು ನಡೆಸಬೇಕೆಂದು ಈಗಾಗಲೇ ಮೌಖಿಕ ಸೂಚನೆ ನೀಡಲಾಗಿದೆ. ಕಳೆದ ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸುತ್ತೋಲೆಯನ್ನು ಹೊರಡಿಸಿತ್ತು. […]