ಪ.ಜಾ ಹಾಗೂ ಪ.ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿ ಸುಗ್ರೀವಾಜ್ಞೆ ಜಾರಿ

ಬೆಂಗಳೂರು,ಅ.20- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದಕ್ಕೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದರಿಂದ ಸರ್ಕಾರದ ಈ ತೀರ್ಮಾನದಿಂದ ಇನ್ನು ಮುಂದೆ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ ಶೇ.15ರಿಂದ 17 ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಶೇ.3ರಿಂದ 7ಕ್ಕೆ ಹೆಚ್ಚಳವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ […]