ಗೋಲ್ಡನ್ ಗ್ಲೋಬ್ ಪ್ರಶಸ್ತಿ ಗೆದ್ದ RRR ಸಿನಿಮಾದ ನಾಟು ನಾಟು ಹಾಡು

ನವದೆಹಲಿ,ಜ.11- ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು ಹಾಡು ಅಮೆರಿಕದ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಗೋಲ್ಡನ್ ಗ್ಲೋಬ್ ಪ್ರಶಸ್ತಿಯ ಎರಡು ವಿಭಾಗಗಳಿಗೆ ನಾಮನಿರ್ದೇಶನಗೊಂಡಿದ್ದ ಆರ್‌ಆರ್‌ಆರ್ ಚಿತ್ರ ನಾಟು ನಾಟು ಹಾಡಿಗಾಗಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ, ಇಂಗ್ಲಿಷ್ ಅಲ್ಲದ ಭಾಷಾ ಚಲನಚಿತ್ರ ಪ್ರಶಸ್ತಿಯಲ್ಲಿ ಎಡವಿದೆ. ಈ ವಿಭಾಗದಲ್ಲಿ ಅರ್ಜೆಂಟೈನಾ ಸಿನಿಮಾ ಪ್ರಶಸ್ತಿ ಗೆದ್ದಿದೆ. ಸಮಾರಂಭದಲ್ಲಿ ಹಾಜರಿದ್ದ ರಾಜಮೌಳಿ, ಜೂ.ಎನ್‍ಟಿಆರ್, ರಾಮಚರಣ್ ಹಾಗೂ ಅವರ ಪತ್ನಿ ಉಪಾಸನಾ ಕಾಮಿನೇನಿ ಮತ್ತಿತರರು ಪ್ರಶಸ್ತಿ […]