ಬಸ್ ಉರುಳಿಬಿದ್ದು ನಾಲ್ವರು ಪ್ರಯಾಣಿಕರ ಸಾವು

ಪುಲ್ವಾಮಾ,ಮಾ.18-ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಪ್ರಯಾಣಿಕರು ಮೃತಪಟ್ಟು, ಇತರ 28 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ದಕ್ಷಿಣ ಕಾಶ್ಮೀರ ಜಿಲ್ಲೆಯ ಬಸೂರ್ ಪ್ರದೇಶದ ಶ್ರೀಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಇಂದು ಬೆಳಿಗ್ಗೆ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೇ ಮಳೆಗೆ ಮುಳುಗಿದ […]

ಪ್ರತ್ಯೇಕ ಅಪಘಾತ : ಉತ್ತರಪ್ರದೇಶದಲ್ಲಿ 39 ಮಂದಿ ಸಾವು

ಕಾನ್ಪುರ,ಅ.2- ಕಳೆದ 24 ಗಂಟೆಗಳ ಅವಧಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ 39 ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಎರಡು ಅಪಘಾತಗಳಿಂದ ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 27 ಮಂದಿ ಟ್ರಾಕ್ಟರ್ ಟ್ರಾಲಿ ಪಲ್ಟಿಯಾಗಿ ಕೆರೆಗೆ ಬಿದ್ದದ್ದರಿಂದ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳೇ ಆಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕಾನ್ಪುರದ ಅಹಿರವಾನ್ […]

ಟ್ರಕ್ ಕಾರಿಗೆ ಡಿಕ್ಕಿ: ನಾಲ್ವರ ದುರ್ಮರಣ

ಹರಿಯಾಣ,ಆ.16- ಟ್ರಕ್‍ವೊಂದು ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಗುರುಗ್ರಾಮ್‍ನಲ್ಲಿ ನಡೆದಿದೆ. ಉದಯಪುರದಿಂದ ಪ್ರವಾಸ ಮುಗಿಸಿಕೊಂಡು ತಮ್ಮೂರಿಗೆ ವಾಪಸ್ಸಾಗುತ್ತಿದ್ದಾಗ ನಸುಕಿನ ಜಾವ 1.40ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಹಿಳೆ ಹಾಗೂ ಮೂವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.ಗುರುಗ್ರಾಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.