ಕೋಲ್ಡ್ ಸ್ಟೋರೇಜ್ ಕುಸಿದು 14 ಮಂದಿ ಸಾವಿನ ಪ್ರಕರಣ, ಇಬ್ಬರು ಮಾಲೀಕರ ಬಂಧನ

ಸಂಭಾಲ್,ಮಾ.18- ಅಕ್ರಮವಾಗಿ ನಿರ್ಮಿಸಲಾಗಿದ್ದ ಕೋಲ್ಡ್ ಸ್ಟೋರೇಜ್ ಕುಸಿತು 14 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಚಂಡೌಸಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ರಸ್ತೆಯಲ್ಲಿದ್ದ ಕೋಲ್ಡ್‍ಸ್ಟೋರೆಜ್ ಗುರುವಾರ ಕುಸಿದಿತ್ತು, ಅದರಡಿ ಸಿಲುಕಿದ್ದ 24 ಜನರನ್ನು ಹೊರತೆಗೆಯಲಾಗಿದೆ. ಅವರಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಕೋಲ್ಡ್ ಸ್ಟೋರೇಜ್ ಮಾಲೀಕರಾದ ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಅವರನ್ನು ಉತ್ತರಾಖಾಂಡದ ಹಲ್ದ್ವಾನಿಯಿಂದ ಬಂಧಿಸಲಾಗಿದೆ ಎಂದು ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ಶ್ರೀಲಂಕಾ ನೆರವಿಗೆ […]

ನೈಸ್‍ ರಸ್ತೆಯ ಅತಿ ಹೆಚ್ಚು ಟೋಲ್ ಸಂಗ್ರಹಕ್ಕೆ ಲಾರಿ ಮಾಲೀಕರ ಆಕ್ರೋಶ

ಬೆಂಗಳೂರು, ಮಾ.13- ನೈಸ್ ರಸ್ತೆಯ ಅತಿ ಹೆಚ್ಚು ಟೋಲ್ ಸಂಗ್ರಹಕ್ಕೆ ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಸೋಸಿಯೇಷನ್ ಅಂಡ್ ಏಜೆಂಟ್ ಅಸೋಸಿಯೇಷನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ, ಸಾರಿಗೆ ಇಲಾಖೆಯು ವಾಣಿಜ್ಯ ವಾಹನಗಳಿಗೆ ರೆಟ್ರೋ ರಿಫ್ಲೆಕ್ಟರ್ ಟೇಪ್‍ಗಳನ್ನು ಅಳವಡಿಸುವಂತೆ ಆದೇಶಿಸಿರುವ ನಿಯಮವನ್ನು ವಾಹನದ ಮಾಲೀಕರು ಪಾಲಿಸಲು ಸಿದ್ಧರಿರುತ್ತಾರೆ. ಆದರೆ ಕ್ಯೂಆರ್ ಕೋಡ್ ಆಧಾರಿತ ರಿಫ್ಲೆಕ್ಟರ್ ಟೇಪ್‍ಗಳನ್ನು ಸಂಘಟನೆಯು ವಿರೋಧಿಸುತ್ತದೆ. ಇದರಿಂದ ದುರುಪಯೋಗ ಆಗುವ ಎಲ್ಲಾ […]

ಕಳವು ಮಾಲು ಜಪ್ತಿ ವೇಳೆ ಪೊಲೀಸರ ಕಿರುಕುಳ : ಶರವಣ ಆಕ್ರೋಶ

ಬೆಂಗಳೂರು,ಫೆ.21- ಕಳವು ಮಾಲು ವಶಪಡಿಸಿ ಕೊಳ್ಳುವ ಸಂದರ್ಭದಲ್ಲಿ ಪೊಲೀಸರು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಆಕ್ರೋಶ ವ್ಯಕ್ತ ಪಡಿಸಿದರು. ಮುಂದಿನ ದಿನಗಳಲ್ಲಿ ಸಮಸ್ಯೆ ಯಾಗದಂತೆ ಎಚ್ಚರಿಕೆ ವಹಿಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟ ಪಡಿಸಿದರು. ಬೋಜನ ವಿರಾಮದ ಬಳಿಕ ಗಮನ ಸೆಳೆಯುವ ಸೂಚನೆಯಲ್ಲಿ ವಿಷಯ ಪ್ರಸ್ತಾಪಿಸಿದ ಶರವಣ, ತಾವು ಚಿನ್ನಾಭರಣ ಅಂಗಡಿಗಳ ಮಾಲೀಕರ ರಾಜ್ಯಾಧ್ಯಕ್ಷರಾಗಿದ್ದು, ಪ್ರತಿ ದಿನ ಹತ್ತಾರು ದೂರುಗಳು ಕೇಳಿ ಬರುತ್ತಿವೆ ಎಂದು ಆರೋಪಿಸಿದರು. ಕಳವು ಮಾಲುಗಳನ್ನು ವಶ […]

ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿರ್ಬಂಧ ವಿರೋಧಿಸಿ ಬಾರಿ ಪ್ರತಿಭಟನೆ

ಬೆಂಗಳೂರು,ಫೆ.9- ನಗರದ ರಸ್ತೆಗಳಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಕ್ರಮವನ್ನು ಖಂಡಿಸಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಟ್ರಾಕ್ಟರ್‍ಗಳ ಸಮೇತ ಫ್ರೀಡಂ ಪಾರ್ಕ್‍ಗೆ ಆಗಮಿಸಿದ ನೂರಾರು ಟ್ರಾಕ್ಟರ್ ಚಾಲಕರು ಹಾಗೂ ಮಾಲೀಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರದ ಈ ನಿರ್ಧಾರ ಖಂಡಿಸಿ ಕಳೆದ ರಾತ್ರಿಯೇ ರಾಜ್ಯದ ನಾನಾ ಮೂಲೆಗಳಿಂದ ನೂರಾರು ಟ್ರಾಕ್ಟರ್‍ಗಳು ನಗರ ಪ್ರವೇಶಿಸಲು ಮುಂದಾದವು . ಆದರೆ, ಪೊಲೀಸರು ಟ್ರಾಕ್ಟರ್‍ಗಳ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಚಾಲಕರು ಸ್ಥಳದಲ್ಲೇ ಟ್ರಾಕ್ಟರ್ ನಿಲ್ಲಿಸಿ ರಸ್ತೆಯಲ್ಲೇ ಮಲಗಿ ಪ್ರತಿಭಟನೆ […]

ನಂದಿನಿ ಹಾಲು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು,ಜ.21- ನಂದಿನಿ ಹಾಲು ಪೂರೈಕೆ ಮಾಡುವ ಲಾರಿ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆ ಹಾದಿ ಹಿಡಿದಿರುವ ಹಿನ್ನೆಲೆ ಯಲ್ಲಿ ನಗರದಾದ್ಯಂತ ಕೆಎಂಎಫ್ ನಂದಿನಿ ಹಾಲು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹಾಲು ಪೂರೈಕೆದಾರರಿಗೆ ಹೆಚ್ಚಿನ ಹಣ ನಿಗದಿಪಡಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಹಾಗೂ ಚಾಲಕರು ನಿನ್ನೆಯಿಂದ ಮುಷ್ಕರ ಆರಂಭಿಸಿರು ವುದರಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಎಂಎಫ್ ಸಂಸ್ಥೆ ಮುಂಭಾಗ 250ಕ್ಕೂ ಹೆಚ್ಚು ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ನಗರದಲ್ಲಿ ಸಮರ್ಪಕವಾಗಿ ನಂದಿನಿ ಹಾಲು ಸರಬರಾಜು ಮಾಡಲಾಗುತ್ತಿಲ್ಲ. ಸದ್ಯ ಒಂದು […]

ಆನ್‍ಲೈನ್‍ನಲ್ಲಿ ಭೂ ಪರಿವರ್ತನೆ ಪೋಡಿ ಸೌಲಭ್ಯ

ಬೆಂಗಳೂರು,ಅ.27- ಸಾರ್ವಜನಿಕರು ತಮ್ಮ ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರ ನಕ್ಷೆಗಳು ಇನ್ನು ಮುಂದೆ ಆನ್‍ಲೈನ್‍ನಲ್ಲಿ ಸಿಗಲಿದೆ. 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸಲ್ಲಿಸಿದ ನಾಗರಿಕರು https://bhoomojini.karnataka.gov.in/service19/report/Applicationdetails ವೆಬ ಸೈಟ್ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಸಹ ವೀಕ್ಷಿಸಬಹುದು. ಅರ್ಜಿ ಸ್ವೀಕಾರಗೊಂಡು ಸರ್ವೇ ಸಿಬ್ಬಂದಿ ತಮ್ಮ ಜಮೀನಿಗೆ ಬಂದು ಸಂಬಂಧಿಸಿದ ಮಾಪನ ಕಾರ್ಯ ಮುಗಿಸಿ ನಕ್ಷೆ ಅನುಮೋದಿಸಿದ ತಕ್ಷಣ ಇದೇ ವೆಬ್‍ಸೈಟ್‍ನಲ್ಲಿ […]