ಪಂಚಮಸಾಲಿ ಮೀಸಲಾತಿ ಬಿಗಿಪಟ್ಟು, ಸರ್ಕಾರಕ್ಕೆ ಬಿಕ್ಕಟ್ಟು

ಬೆಳಗಾವಿ, ಡಿ.22- 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬಿಗಿಪಟ್ಟು ಹಿಡಿದು ಹೋರಾಟ ಮುಂದುವರೆಸಿರುವುದು ಸರ್ಕಾರಕ್ಕೆ ಬಿಕ್ಕಟ್ಟು ಸೃಷ್ಟಿಸಿದೆ. ಪ್ರಸ್ತುತ ಅಧಿವೇಶನ ಸಂದರ್ಭದಲ್ಲಿ ಮೀಸಲಾತಿ ಘೋಷಣೆ ಮಾಡಬೇಕೆಂದು ಗಡುವು ನೀಡಿ ಹೋರಾಟಕ್ಕಿಳಿದಿರುವ ಪಂಚಮಸಾಲಿ ಮೀಸಲಾತಿ ಹೋರಾಟ ಸಮುದಾಯದ ನೇತೃತ್ವ ವಹಿಸಿರುವ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಇನ್ನಿತರ ಮುಖಂಡರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿರುವುದು ಅಧಿವೇಶನದ ಸಂದರ್ಭದಲ್ಲಿ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಇಂದೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಲಕ್ಷಾಂತರ ಜನರ […]