ರಾಜ್ಯದಲ್ಲಿ ಮತ್ತೆ ಹೆಚ್ಚಾದ ಕೇಸರಿ ಕಿಚ್ಚು

ಬೆಂಗಳೂರು,ನ.14- ವಿವೇಕ ಯೋಜನೆಯಡಿ ನೂತನವಾಗಿ ರಾಜ್ಯಾದ್ಯಂತ ಪ್ರಾಥಮಿಕ ಶಾಲಾ ಹಾಗೂ ಪದವಿಪೂರ್ವ ಕಾಲೇಜು ಕೊಠಡಿಗಳಿಗೆ ಕೇಸರಿ ಬಣ್ಣ ಹಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ತೀವ್ರ ವಿವಾದ ಸೃಷ್ಟಿಸಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರತಿಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್, ಪ್ರಗತಿಪರರು, ಬುದ್ದಿಜೀವಿಗಳು, ಚಿಂತಕರು, ಶಿಕ್ಷಣ ತಜ್ಞರು ತೀವ್ರವಾಗಿ ವಿರೋಧಿಸಿ ಇದು ಬಿಜೆಪಿಯ ಕೇಸರೀಕರಣದ ಮುಂದುವರೆದ ಭಾಗ ಎಂದು ಕಟುವಾಗಿ ಟೀಕಿಸಿದ್ದಾರೆ. ಆದರೆ ಸರ್ಕಾರ ಮಾತ್ರ ಇದನ್ನು ಬಲವಾಗಿ ಸಮರ್ಥಿಸಿಕೊಂಡಿದೆ. ಶಿಕ್ಷಣಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಸರ್ಕಾರ ಶಾಲಾ ಶಿಕ್ಷಣ […]