ಪಂಜಾಬ್‍ನ ಗಡಿಯಲ್ಲಿ ಚೀನಾ ಮೇಡ್ ಶಸ್ತ್ರಾಸ್ತ್ರ, ಡ್ರಗ್ಸ್ ಎಸೆದ ಪಾಕ್ ಡ್ರೋನ್

ನವದೆಹಲಿ,ಫೆ.10- ಪಂಜಾಬ್ ಸಮೀಪದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಚೀನಾ ಮೇಡ್ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳನ್ನು ಎಸೆದಿದೆ. ಪಂಜಾಬ್‍ನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್‍ನಿಂದ ಬಿದ್ದಿದೆ ಎನ್ನಲಾದ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳ ಸಂಗ್ರಹವನ್ನು ಗಡಿ ಭದ್ರತಾ ಪಡೆ ವಶಪಡಿಸಿಕೊಂಡಿದೆ. ರಾಜ್ಯದ ಫಿರೋಜ್‍ಪುರ ಸೆಕ್ಟರ್‍ನ ಗಡಿ ಪೋಸ್ಟ್‍ನಲ್ಲಿರುವ ಎಂಡಬ್ಲ್ಯೂ ಉತ್ತರ ಪ್ರದೇಶದ ಭಾರತೀಯ ಭೂಪ್ರದೇಶದೊಳಗೆ ಬಂದ ಪಾಕ್ ಡ್ರೋನ್‍ನ ಮೇಲೆ ಭಾರತೀಯ ಸೈನಿಕರು ಗುಂಡು ಹಾರಿಸಿದರು. ಮನೆಗಳ್ಳನ ಬಂಧನ : 18 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ವಶ […]

ಗಡಿಯಲ್ಲಿ ಹೆಚ್ಚಾಯ್ತು ಡ್ರಗ್ಸ್, ಶಸ್ತ್ರಾಸ್ತ್ರ ಸಾಗಿಸುವ ಪಾಕ್ ಡ್ರೋನ್ ಹಾವಳಿ

ಚಂಡೀಗಢ, ಡಿ .22-ಗಡಿ ಪ್ರದೇಶದಲ್ಲಿ ದಟ್ಟವಾದ ಮಂಜಿನ ಲಾಭ ಪಡೆದು ಡ್ರೋನ್‍ಗಳ ಮೂಲಕ ಪಾಕಿಸ್ತಾನ ಕಡೆಯಿಂದ ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಹೆಚ್ಚಾಗುತ್ತಿದ್ದು ಗಡಿ ಭದ್ರತಾ ಪಡೆ ಕಟ್ಟೆಚ್ಚರ ವಹಿಸಿದೆ. ಕಳೆದ ಕೆಲವು ದಿನಗಳಲ್ಲಿ ದಟ್ಟವಾದ ಮಂಜಿನ ಹಿನ್ನೆಲೆಯಲ್ಲಿ ಗಡಿಯಾಚೆಯಿಂದ ಶಸ್ತ್ರಾಸ್ತ್ರಗಳು ಮತ್ತು ಹೆರಾಯಿನ್ ಮಾದಕವನ್ನು ಭಾರತದ ಭೂಪ್ರದೇಶಕ್ಕೆ ಡ್ರೋನ್ ಮೂಲಕ ಕಳುಹಿಸುತ್ತಿರುವುದು ಗಣನೀಯವಾಗಿ ಹೆಚ್ಚಿವೆ ಎಂದು ಬಿಎಸ್‍ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಸುಮರು 25 ಕೆಜಿ ಹೆರಾಯಿನ್ ಮದಕವಸ್ತುವನ್ನು ಫಾಜಿಲ್ಕಾದಲ್ಲಿನ ಕೃಷಿ ಭೂಮಿಯಲ್ಲಿ ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. […]