ಅಫ್ಘಾನ್ ಗಡಿಯಲ್ಲಿ ಉಗ್ರರ ಅಡಗುತಾಣದ ಮೇಲೆ ಪಾಕ್ ದಾಳಿ

ಇಸ್ಲಾಮಾಬಾದ್, ಮಾ 16 -ಪಾಕಿಸ್ತಾನಿ ಭದ್ರತಾ ಪಡೆಗಳು ಅಫ್ಘಾನಿಸ್ತಾನದ ಗಡಿಯ ಸಮೀಪರುವ ಉಗ್ರರ ಅಡಗುತಾಣದ ಮೇಲೆ ದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಎಂಟು ಬಂಡುಕೋರರು ಸಾವನ್ನಪ್ಪಿದ್ದಾರೆ ಎಂದು ಸೇನಾಕಾರಿಗಳ ತಿಳಿಸಿದ್ದಾರೆ. ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ದಕ್ಷಿಣ ವಜಿರಿಸ್ತಾನದ ಹೊರಠಾಣೆ ಮೇಲೆ ದಾಳಿಯ ಸಂದರ್ಭದಲ್ಲಿ ಇಬ್ಬರು ಮಕ್ಕಳನ್ನು ಕೊಂದು ಬೆಂಕಿ ಹಚ್ಚಲಾಗಿದೆ ಆದರ ಈ ಕೃತ್ಯ ಯಾರು ಮಾಡಿದರು ಎಂಬುದು ಸ್ಪಷ್ಟವಾಗಿಲ್ಲ. ಹಿಂಸಾಚಾರದ ಬಗ್ಗೆ ಹೇಳಿಕೆ ನೀಡಿರುವ ಸೇನೆ, ಹತ್ಯೆಯಾದ ದಂಗೆಕೋರರು ಯಾವ ಉಗ್ರಗಾಮಿ ಗುಂಪಿಗೆ ಸೇರಿದ್ದಾರೆ […]
ಕಾಶ್ಮೀರ ವಿಚಾರ : ವಿಶ್ವಸಂಸ್ಥೆಯಲ್ಲಿ ದಿವಾಳಿ ಪಾಕ್‍ಗೆ ಭಾರತದ ತಿರುಗೇಟು

ವಿಶ್ವಸಂಸ್ಥೆ,ಫೆ.24- ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಉಕ್ರೇನ್ ಕುರಿತ ವಿಶೇಷ ಅವೇಶನದಲ್ಲಿ ಜಮ್ಮು-ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿರುವ ಭಾರತ ಭಯೋತ್ಪಾದಕರಿಗೆ ರಕ್ಷಣೆ ಮತ್ತು ಆಶ್ರಯ ಒದಗಿಸುವ ದೇಶದಿಂದ ಇಂತಹ ಮಾತುಗಳನ್ನು ನಿರೀಕ್ಷಿರಲಿಲ್ಲ ಎಂದು ತಿರುಗೇಟು ನೀಡಿದೆ. ಪಾಕಿಸ್ತಾನದ ಚೇಷ್ಟೆಯ ಪ್ರಚೋದನೆಗಳಿಗೆ ಪ್ರತಿಕ್ರಿಯಿಸದಿರಲು ನಾವು ತೀರ್ಮಾನಿಸಿದ್ದೇವೆ. ವಿಶೇಷ ಸಭೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿರುವ ಪಾಕಿಸ್ತಾನದ ಪ್ರತಿನಿಗೆ ನಮ್ಮ ಸಲಹೆಯೆಂದರೆ, ನಾವು ಹಿಂದೆ ಚಲಾಯಿಸಿದ ನಮ್ಮ ಹಲವಾರು ಪ್ರತ್ಯುತ್ತರ ಹಕ್ಕುಗಳನ್ನು ಉಲ್ಲೇಖಿಸುವದಾಗಿದೆ ಎಂದು ಭಾರತದ ಖಾಯಂ ಮಿಷನ್‍ನ ಸಲಹೆಗಾರ […]
ಇಂಗ್ಲೆಂಡ್‍ಗೆ ಅಪಾಯಕಾರಿ ಯುರೇನಿಯಂ ರವಾನೆ:
ಆರೋಪ ತಳ್ಳಿ ಹಾಕಿದ ಪಾಕ್

ಇಸ್ಲಾಮಾಬಾದ್,ಜ.12- ಕಳೆದ ತಿಂಗಳು ಲಂಡನ್‍ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಯುರೇನಿಯಂ ಮಿಶ್ರಿತ ಸರಕುಗಳು ಕರಾಚಿಯಿಂದ ರವಾನೆಯಾಗಿವೆ ಎಂಬ ಬ್ರಿಟಿಷ್ ಮಾಧ್ಯಮಗಳ ವರದಿಗಳನ್ನು ಪಾಕಿಸ್ತಾನ ತಳ್ಳಿ ಹಾಕಿದೆ. ಕಳೆದ ತಿಂಗಳು ಹೀಥ್ರೂ ವಿಮಾನ ನಿಲ್ದಾಣದಲ್ಲಿ ಯುರೇನಿಯಂನಿಂದ ಕಲುಷಿತಗೊಂಡ ಸರಕುಗಳನ್ನು ಗಡಿ ಅಧಿಕಾರಿಗಳು ವಶಪಡಿಸಿಕೊಂಡರು. ನಂತರ ಬ್ರಿಟಿಷ್ ಭಯೋತ್ಪಾದನಾ ನಿಗ್ರಹ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದರು. ಬ್ರಿಟಿಷ್ ಮೂಲದ ಸನ್ ಪತ್ರಿಕೆ ಈ ಕುರಿತು ವರದಿ ಮಾಡಿದ್ದು,ಯುರೇನಿಯಂ ಪಾಕಿಸ್ತಾನದಿಂದ ಬಂದಿದೆ ಎಂದು ಹೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪಾಕಿಸ್ತಾನದ ಉನ್ನತ […]
ನಮ್ಮ ಹತ್ರ ಅಣುಬಾಂಬ್ ಇದೆ : ಭಾರತಕ್ಕೆ ಬೆದರಿಕೆ ಹಾಕಿದ ಪಾಕ್ ಸಚಿವೆ

ಇಸ್ಲಾಮಾಬಾದ್,ಡಿ.18- ಪ್ರಧಾನಿ ಮೋದಿ ಕುರಿತು ಪಾಕ್ ಸಚಿವ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೆ ಮತ್ತೊಬ್ಬ ಪಾಕ್ ಸಚಿವೆ ಶಾಜಿಯಾ ಮಾರಿ ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದಕ್ಕೆ ಭಾರತದಲ್ಲಿ ವ್ಯಪಕ ಪ್ರತಿಭಟನೆ ನಡೆದು ಒಂದು ದಿನದ ನಂತರ ಮತ್ತೆ ಮಾಧ್ಯಮ ಸಂದರ್ಶನದ ವೇಳೆ ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ ಪರಮಾಣು ಮೌ ನವಾಗಿದೆ ಅಗತ್ಯ ಬಿದ್ದರೆ ನಾವು ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು. […]
ಮೋದಿ ವಿರುದ್ಧ ಬಿಲಾಲ್ ಹೇಳಿಕೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ

ನವದೆಹಲಿ,ಡಿ.17- ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿದ್ದ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾಲ್ ಭುಟ್ಟೋ ವಿರುದ್ಧ ದೇಶಾದ್ಯಂತ ಇಂದು ಪ್ರತಿಭಟನೆಗಳು ನಡೆದಿದ್ದು, ಭಾರೀ ಆಕ್ರೋಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ರಾಜಧಾನಿ ಕೇಂದ್ರ ಹಾಗೂ ಪ್ರಮುಖ ನಗರಗಳಲ್ಲಿ ಪ್ರತಿಭಟನೆಗಳು ವರದಿಯಾಗಿವೆ. ಮಹಾರಾಷ್ಟದ ಪುಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ಸ ಬವಾಂಕುಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಮುಂಬೈನಲ್ಲೂ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪಾಕಿಸ್ತಾನ ಮತ್ತು ಅಲ್ಲಿನ ವಿದೇಶಾಂಗ […]
ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ಬಿಎಸ್ವೈ ಕಿಡಿ

ಬೆಂಗಳೂರು, ಡಿ.17- ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತಾಗಿ ಮಾಡಿರುವ ಟೀಕೆಯು ಅವರ ಕೀಳು ಮನಸ್ಥಿತಿಯನ್ನು ಬಯಲು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಅವರ ಹೇಳಿಕೆಯು ಪಾಕಿಸ್ತಾನ ಸರ್ಕಾರದ ನೀಚ ಮನೋಸ್ಥಿತಿಯನ್ನು ಪ್ರತಿಬಿಂಬಿಸಿದೆ. ಇಡೀ ವಿಶ್ವದಲ್ಲಿಯೇ ಶಾಂತಿ ನೆಲೆಸು ವಂತಾಗಲು ಭಾರತದ ಪ್ರಧಾನಿಯವರು ನೇತೃತ್ವ ವಹಿಸಬೇಕೆಂದು ವಿಶ್ವದ ಎಲ್ಲಾ ಪ್ರಮುಖ ದೇಶಗಳು […]