ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ: ಸಚಿವ ಬಿ.ಸಿ ಪಾಟೀಲ್

ಬೆಂಗಳೂರು,ಅ.19- ರೈತರ ಸಿರಿಧಾನ್ಯ ಬೆಳೆಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡಿ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಜನವರಿ 20ರಿಂದ 22ರವರೆಗೆ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕರ್ನಾಟಕ ಸಿರಿಧಾನ್ಯ ಬೆಳೆಯಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಉತ್ಪಾದನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ಇದರ ಮಾರುಕಟ್ಟೆ ವಿಸ್ತರಣೆ ರೈತರ ಬೆಳೆಗೆ ಸೂಕ್ತ ಬೆಲೆ ನೀಡುವುದು ಸೇರಿದಂತೆ ಮತ್ತಿತರ ಸದುದ್ದೇಶಕ್ಕಾಗಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು. ಮೇಳಕ್ಕೆ […]

ಮೈಸೂರು ಅರಮನೆ ಕೋಟೆ ಗೋಡೆ ಕುಸಿತ

ಮೈಸೂರು,ಅ.18- ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಐತಿಹಾಸಿಕ ಮೈಸೂರು ಅರಮನೆ ಸುತ್ತ ನಿರ್ಮಿಸಲಾಗಿದ್ದ ಕೋಟೆಯ ಗೋಡೆ ಕುಸಿದಿದೆ. ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಇರುವ ಕೋಟೆಯ ಗೋಡೆ ಕುಸಿದಿದೆ. ಅರಮನೆ ರಕ್ಷಣೆಗಾಗಿ ನಿರ್ಮಿಸಲಾಗಿದ್ದ ಕೋಟೆಯ ಗೋಡೆ ಇದಾಗಿದೆ. ಕೋಟೆ ಮಾರಮ್ಮ ದೇಗುಲ ಜಯಮಾರ್ತಾಂಡ ದ್ವಾರದ ನಡುವಿನ ಕೋಟೆಯ ಗೋಡೆ ಇದಾಗಿದೆ. ಆಳರಸರ ಕಾಲದಲ್ಲಿ ಅರಮನೆಯ ರಕ್ಷಣೆಗಾಗಿ ಈ ಕೋಟೆಯನ್ನು ನಿರ್ಮಿಸಲಾಗಿತ್ತು. ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ಅರಮನೆ ಸುತ್ತಲೂ ಈ ಕೋಟೆಯನ್ನು ನಿರ್ಮಿಸಲಾಗಿತ್ತು. […]

ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಸಿದ್ಧತೆ, ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು, ಸೆ.20- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಮೈಸೂರು ಅರಮನೆಯಲ್ಲಿಂದು ಸಿಂಹಾಸನ ಜೋಡಣೆ ಆರಂಭಿಸಲಾಗಿದೆ. ಈ ಕಾರಣದಿಂದ ಅರಮನೆಗೆ ಈ ದಿನ ಮಧ್ಯಾಹ್ನದ ತನಕ ಸಾರ್ವಜನಿಕರ ಪ್ರವೇಶ ನಿರ್ಬಂಧ ಗೊಳಿಸಲಾಗಿದೆ. ಸಿಂಹಾಸನ ಜೋಡಣೆ ಮಾಡುತ್ತಿರುವ ಕಾರಣ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅರಮನೆಯ ಗೇಟ್‍ಗಳನ್ನು ಬಂದ್ ಮಾಡಲಾಗಿದೆ. ಗೆಜ್ಜಗಳ್ಳಿ ಗ್ರಾಮದ ನುರಿತವರು ಐತಿಹ್ಯ ಸಿಂಹಾಸನ ಜೋಡಣೆ ಕಾರ್ಯದಲ್ಲಿ ತೊಡಗಿದ್ದಾರೆ. ರತ್ನಖಚಿತ ಸಿಂಹಾಸನ ಜೋಡಣಾ ಕಾರ್ಯ ಈಗ ಆರಂಭವಾಗಿದೆ. ಇದನ್ನೂ ಓದಿ : […]