ನಾಳೆಯಿಂದ ಮತ್ತೆ ಪ್ರಾರಂಭ ಜೆಡಿಎಸ್ ಪಂಚರತ್ನ ರಥಯಾತ್ರೆ

ಬೆಂಗಳೂರು, ಡಿ.14-ಮ್ಯಾಂಡೋಸ್ ಚಂಡ ಮಾರುತದ ಪ್ರಭಾವದಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಜೆಡಿಎಸ್ ಪಂಚರತ್ನ ರಥಯಾತ್ರೆ ನಾಳೆಯಿಂದ ಮತ್ತೆ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಪ್ರಾರಂಭವಾಗಲಿದೆ. ಪೂರ್ವ ನಿಗದಿಯಂತೆ ಮೊದಲ ಹಂತದ ಮುಂದುವರೆದ ಪಂಚರತ್ನ ರಥಯಾತ್ರೆಯು ಡಿ.11ರಂದು ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಮರು ಆರಂಭವಾಗಬೇಕಿತ್ತು. ಮಳೆಯಿಂದ ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿತ್ತು. ಕಳೆದ ಒಂದು ವಾರದಿಂದ ನಿರಂತರವಾಗಿ ಬರುತ್ತಿದ ಮಳೆ ಬಿಡುವು ಕೊಟ್ಟಿರುವ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಿಂದ ಈ ಯಾತ್ರೆಯನ್ನು ಪ್ರಾರಂಭ ಮಾಡಲಾಗುತ್ತದೆ. ಮಾಜಿ […]