ಕಳೆದ 8 ವರ್ಷದಿಂದ ದೇಶ ಶಾಂತಿಯುತವಾಗಿದೆ : ಅಮಿತ್ ಶಾ

ಹೈದರಾಬಾದ್,ಫೆ.11- ಕಳೆದ ಎಂಟು ವರ್ಷಗಳಿಂದ ಕೇಂದ್ರ ಸರ್ಕಾರ ತೆಗೆದುಕೊಂಡ ಕಠಿಣ ಕ್ರಮಗಳಿಂದ ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಹಿಂಸಾಕೃತ್ಯಗಳು ಕ್ಷೀಣಿಸಿದ್ದು, ಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಕೇಂದ್ರ ಗೃಹ ಸಚಿವರ ಅಮಿತ್ ಶಾ ಹೇಳಿದ್ದಾರೆ. ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ (ಎಸ್‍ವಿಪಿಎನ್‍ಪಿಎ)ನಲ್ಲಿ ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ಪ್ರೊಬೇಷನರ್ಸ್‍ನ 74 ನೇ ಬ್ಯಾಚ್‍ನ ಪರೇಡ್‍ನಲ್ಲಿ ಮಾತನಾಡಿದ ಅವರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಅಂಗ ಸಂಸ್ಥೆಗಳನ್ನು ನಿಷೇಧ ಮಾಡಿದ ದಿನ […]

ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ಸಾಕಾರಗೊಳಿಸೋಣ : ಪ್ರಧಾನಿ ಮೋದಿ

ನವದೆಹಲಿ,ಜ.26- ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವು ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಒಂದು ದೇಶವಾಗಿ ಎಲ್ಲಾ ನಾಗರಿಕರಿಗೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿನಿಂದ ಮುನ್ನಡೆಯೋಣ ಎಂದು ಪ್ರದಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜನವರಿ 26 ರ ದಿನವು ವಿಶೇಷ ಹಾಗು ಬಹಳ ಮುಖ್ಯ ದಿನವಾಗಿದೆ ಏಕೆಂದರೆ ಈ ದಿನದಂದು ನಾವು ದೇಶದ ಸಂವಿಧಾನವನ್ನು ಪಡೆದುಕೊಂಡಿದ್ದೇವೆ. ಗಣರಾಜ್ಯೋತ್ಸವಕ್ಕೂ ದೇಶದ ಜನತೆಗೆ ಶುಭಾಶಯ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.ಯಲ್ಲರೂ ಜೊತೆಗೂಡಿ ಸಶಕ್ತ ದೇಶದ ಕಟ್ಟೋಣ […]

ಕನ್ನಡಿಗರ ಆಕ್ರೋಶಕ್ಕೆ ಮಣಿದ ಕೇಂದ್ರ: ರಾಜ್ಯದ ಸ್ತಬ್ಧ ಚಿತ್ರಕ್ಕೆ ಅನುಮತಿ

ಬೆಂಗಳೂರು,ಜ.12- ಕೊನೆಗೂ ಕನ್ನಡಿಗರ ಆಕ್ರೋಶಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಜ.26ರ ಗಣರಾಜ್ಯೋತ್ಸವ ದಂದು ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಈ ಹಿಂದೆ ತಾಂತ್ರಿಕ ಕಾರಣಗಳನ್ನು ನೀಡಿ ಕರ್ನಾಟಕದ ಸ್ತಬ್ಧ ಚಿತ್ರವನ್ನು ತಿರಸ್ಕರಿಸಲಾಗಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ ಎಲ್ಲೆಡೆ ವ್ಯಕ್ತವಾಗಿತ್ತು. ಇದೀಗ ಸತತ 14ನೇ ಬಾರಿಗೆ ಜ.26ರ ಗಣರಾಜ್ಯೋತ್ಸವದಂದು ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಕರ್ನಾಟಕದ ನಾರಿಶಕ್ತಿ ಸ್ತಬ್ಧ ಚಿತ್ರ ಪ್ರದರ್ಶನವಾಗಲಿದೆ. ಇದೀಗ ಸಮಿತಿಯು ಕರ್ನಾಟಕದ ಸ್ತಬ್ಧ […]

ಮಾಣಿಕ್ ಷಾ ಪೆರೇಡ್ ಮೈದಾನಲ್ಲಿ ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ

ಬೆಂಗಳೂರು,ಆ.15- 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಕೇವಲ ಧ್ವಜಾರೋಹಣಕ್ಕೆ ಮಾತ್ರ ಸ್ವಾತಂತ್ರ್ಯೋತ್ಸವ ಸೀಮಿತವಾಗಿತ್ತು. ಆದರೆ ಈ ಬಾರಿ ಕೋವಿಡ್ ಕ್ಷೀಣಿಸಿದ್ದರಿಂದ ಸ್ವತಂತ್ರ್ಯೋತ್ಸವದ ಗೀತೆಗಳು ಮೊಳಗಿದವು. ಬಿಬಿಎಂಪಿ ಮತ್ತು ಬೆಂಗಳೂರು ನಗರ ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಇತಿಹಾಸ ಮರುಕಳಿಸುವ ದೃಶ್ಯಗಳು ಮೈನವಿರೇಳಿಸಿದವು. ಮುಖ್ಯಮಂತ್ರಿಗಳ ಭಾಷಣ ಮುಗಿಯುತ್ತಿದ್ದಂತೆ ಒಂದೊಂದೇ ತಂಡವಾಗಿ ಶಾಲಾ ಮಕ್ಕಳು ರಾಷ್ಟ್ರದ ಏಕತೆ, ವೈವಿಧ್ಯತೆ ಸಾರುವ ಗೀತೆಗಳಿಗೆ […]