ವಿಶ್ವವಿದ್ಯಾಲಯಗಳಲ್ಲಿ ದೇಶ ವಿಭಜನೆಯ ಕರಾಳ ದಿನದ ಕುರಿತು ಕಾರ್ಯಾಗಾರ

ನವದೆಹಲಿ,ಆ.6-ವಿಶ್ವವಿದ್ಯಾಲಯದ ಅನುದಾನ ಆಯೋಗ ಆ.14ನ್ನು ದೇಶ ವಿಭಜನೆಯ ಭಯಾನಕ ನೆನಪಿನ ದಿನವನ್ನಾಗಿ ಆಚರಿಸಲು ತನ್ನ ಅಧೀಧಿನದಲ್ಲಿರುವ ಎಲ್ಲ ಉನ್ನತ ಶಿಕ್ಷಣಸಂಸ್ಥೆಗಳಿಗೆ ಸೂಚನೆ ನೀಡಿದೆ. ಆಯೋಗದ ಅಧ್ಯಕ್ಷ ಎಂ.ಜಗದೀಶ್‍ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರಮೋದಿ ಅವರು ಆ.14ನ್ನು ದೇಶ ವಿಭಜನೆಯ ಭಯಾನಕ ನೆನಪಿನ ದಿನವನ್ನಾಗಿ ಕಳೆದ ವರ್ಷ ಘೋಷಿಸಿದ್ದಾರೆ. ಅದರ ಅಂಗವಾಗಿ ಈ ವರ್ಷ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಅದರೊಂದಿಗೆ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ಆ.14ರಂದು ದೇಶವಿಭಜನೆಯ ಕುರಿತಂತೆ ವಿಚಾರ ಸಂಕಿರಣಗಳು, ಕಾರ್ಯಾಗಾರಗಳು ಹಾಗೂ […]