ಐರನ್ ಬಾಕ್ಸ್ ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಕೆಜಿ ಚಿನ್ನ ವಶ

ಬೆಂಗಳೂರು,ಡಿ.3- ಕಳೆದ ತಿಂಗಳು ನಡೆದ ಕಾರ್ಯಾ ಚರಣೆಯಲ್ಲಿ ವಿದೇಶದಿಂದ ವಿವಿಧ ಸ್ವರೂಪದಲ್ಲಿ ಕಳ್ಳ ಸಾಗಾಣಿಕೆ ಮೂಲಕ ತರಲಾಗಿದ್ದ ಏಳು ಕೆಜಿಗೂ ಅಧಿಕ ತೂಕದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶ ಪಡಿಸಿ ಕೊಳ್ಳಲಾಗಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಐರನ್ ಬಾಕ್ಸ್‍ನಲ್ಲಿ ಅಡಗಿಸಿಟ್ಟು ತರುತ್ತಿದ್ದ ಒಂದುವರೆ ಕೋಟಿ ರೂಪಾಯಿಗೆ ಹೆಚ್ಚಿನ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ದುಬೈನಿಂದ ನವೆಂಬರ್ 29ರಂದು ಮುಂಜಾನೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಕೆ 568 ಸಂಖ್ಯೆಯ ವಿಮಾನದಲ್ಲಿ ಪ್ರಯಾಣಿಕರನ್ನು […]

ಮತ್ತೊಮ್ಮೆ ದಕ್ಷಿಣ ಕೊರಿಯಾದತ್ತ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ

ಸಿಯೋಲ್, ನ.9-ಉತ್ತರ ಕೊರಿಯಾ ಪ್ರಚೋದನೆಗಳು ಮುಂದುವರೆದಿದ್ದು, ದಕ್ಷಿಣ ಕೊರಿಯಾದ ಪೂರ್ವವಲಯದ ಸಮುದ್ರದತ್ತ ಒಂದು ಖಂಡಾಂತರ ಕ್ಷಿಪಣಿಯನ್ನು ಹಾರಿಸಿದೆ. ಹಾರಿಸಲಾದ ಕ್ಷಿಪಣಿ ಎಷ್ಟು ದೂರದವರೆಗೂ ತಲುಪಿದೆ ಎಂಬುದನ್ನು ದಕ್ಷಿಣ ಕೊರಿಯಾ ಸ್ಪಷ್ಟಪಡಿಸಿಲ್ಲ. ಆದರೆ ಇದನ್ನು ಪ್ರಚೋದನಾ ಕೃತ್ಯ ಎಂದು ಆಕ್ಷೇಪಿಸಿದೆ. ಇತ್ತೀಚೆಗೆ ಅಮೆರಿಕಾ ಮತ್ತು ದಕ್ಷಿಣ ಕೊರಿಯಾ ಜಂಟಿ ಸಮರಾಭ್ಯಾಸ ನಡೆಸಿದ್ದಕ್ಕೆ ಪ್ರತಿಯಾಗಿ ಕಳೆದ ವಾರ ಉತ್ತರ ಕೊರಿಯಾ ಡಜನ್‍ಗೂ ಹೆಚ್ಚು ಕ್ಷಿಪಣಿಗಳನ್ನು ಉಡಾವಣೆ ಮಾಡಿ ಆಕ್ರೋಶ ಹೊರ ಹಾಕಿತ್ತು. ಉತ್ತರ ಕೊರಿಯಾ ಪದೇ ಪದೇ ಅಣ್ವಸ್ತ್ರ ಪರೀಕ್ಷೆ […]

ಮುಂದುವರೆದ ವರುಣನ ಅಬ್ಬರ, ನೆಲೆ ಕಳೆದುಕೊಂಡ ಮಂದಿ

ಬೆಂಗಳೂರು,ಆ.8- ರಾಜ್ಯದ ಹಲವೆಡೆ ಮಳೆ ಮುಂದುವರಿದಿದ್ದು, ಮಳೆ ಹಾನಿಯಿಂದಾಗಿ ಈವರೆಗೂ 74 ಮಂದಿ ಸಾವನ್ನಪ್ಪಿದ್ದಾರೆ. ಜೂನ್ ಆರಂಭದಲ್ಲಿ ಮುಂಗಾರು ಪ್ರಾರಂಭವಾ ದಾಗಿನಿಂದ, 74 ಜನರು ಪ್ರಾಣ ಕಳೆದುಕೊಂಡಿದ್ದಾರೆ, 36 ಜನರು ಗಾಯಗೊಂಡಿದ್ದಾರೆ ಮತ್ತು 1.38 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಕೆಟ್ಟದಾಗಿ ಹಾನಿಗೊಳಗಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. 14 ಜಿಲ್ಲೆಗಳಲ್ಲಿ 161 ಗ್ರಾಮಗಳಲ್ಲಿ 21,727 ಜನರು ತೊಂದರೆಗೀಡಾಗಿದ್ದು, 8,197 ಜನರನ್ನು ಸ್ಥಳಾಂತರಿಸಲಾಗಿದೆ. ಒಟ್ಟು 7,386 ಜನರು 36 ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. 11,768 ಕಿಮೀ ರಸ್ತೆಗಳು ಮತ್ತು […]

ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ: 4 ದಿನ ಗುಡುಗು ಮಿಂಚು ಸಹಿತ ಮಳೆ

ಬೆಂಗಳೂರು,ಆ.3- ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಆರ್ಭಟಿಸುತ್ತಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದ್ದು, ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಡುಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ದೇವರಕೊಲ್ಲಿ ಹಾಗು ಕೊಯ್ನಾಡು ನಡುವಿನ ರಸ್ತೆ ಬಿರುಕು ಬಿಟ್ಟು, ಖಾಸಗಿ ಹಾಗೂ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಗಡಿಭಾಗವಾದ ಕಲ್ಲುಗುಂಡಿ, ಸಂಪಾಜೆ, ಗೂನಡ್ಕ ಗ್ರಾಮಗಳು ಜಲಾವೃತಗೊಂಡಿವೆ. ಭಾರೀ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಮೈಸೂರು, ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಸುಳ್ಯ […]