ಚುನಾವಣಾ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಪಕ್ಷಾಂತರ ಪರ್ವ ಆರಂಭ

ಬೆಂಗಳೂರು,ಸೆ.4- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ರಾಜ್ಯದಲ್ಲಿ ಮತ್ತೆ ಪಕ್ಷಾಂತರ ಪರ್ವ ಸದ್ದು ಮಾಡುತ್ತಿದ್ದು, ಶಾಸಕರು, ಹಿರಿಯ ನಾಯಕರು ಆ ಪಕ್ಷದಿಂದ ಈ ಪಕ್ಷ, ಈ ಪಕ್ಷದಿಂದ ಆ ಪಕ್ಷದತ್ತ ಹಾರಾಟ ಶುರು ಮಾಡಿದ್ದಾರೆ. ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಯಚೂರು, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳ ಶಾಸಕರು ಪಕ್ಷಾಂತರಕ್ಕೆ ವೇದಿಕೆ ಸಜ್ಜು ಮಾಡಿಕೊಂಡಿದ್ದಾರೆ.ಕಾಂಗ್ರೆಸ್ ಮತ್ತು ಜೆಡಿಎಸ್‍ನಲ್ಲಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡಿರುವ ಹಲವಾರು ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದರೆ, ಮತ್ತೊಂದು ಕಡೆ ಬಿಜೆಪಿ ಮತ್ತು ಜೆಡಿಎಸ್‍ನ ಕೆಲ […]