ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್ ಮುಕ್ತ
ಬೆಂಗಳೂರು, ಫೆ.16- ರಾಜಧಾನಿಯಿಂದ ಹಲವು ಜಿಲ್ಲೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈ ಓವರ್ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದು ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ತುಮಕೂರು ರಸ್ತೆಯ ಫ್ಲೈ ಓವರ್‍ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು. ದುರಸ್ತಿ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದಿನಿಂದ ಲಘು ವಾಹನಗಳಾದ ದ್ವಿಚಕ್ರ ವಾಹನಗಳು, ಆಟೊ, ಕಾರುಗಳು ಫ್ಲೈ ಓವರ್ ಮೇಲೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಭಾರೀ ವಾಹನಗಳ ಸಂಚಾರವನ್ನು ನಿರ್ಬಂಸಲಾಗಿದೆ. […]