ಓವೈಸಿ ಮನೆ ಮೇಲೆ ಕಲ್ಲು ತೂರಾಟ

ನವದೆಹಲಿ,ಫೆ.20- ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ನಿವಾಸದ ಮೇಲೆ ಕಿಡಿಗೇಡಿಗಳು ಕಲ್ಲೆಸೆದಿದ್ದಾರೆ. ದೆಹಲಿಯಲ್ಲಿರುವ ಓವೈಸಿ ಅವರ ನಿವಾಸದ ಮೇಲೆ ಅಪರಿಚಿತ ದುಷ್ಕರ್ಮಿಗಳು ನಿನ್ನೆ ಸಂಜೆ ಕಲ್ಲು ತೂರಾಟ ನಡೆಸಿದ್ದಾರೆ.ಘಟನೆಯಲ್ಲಿ ಮನೆಯ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಅಶೋಕ ರಸ್ತೆಯಲ್ಲಿರುವ ನಮ್ಮ ಮನೆ ಮೇಲೆ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಓವೈಸಿ ಅವರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಅಸುರರ ಪಟ್ಟಿಯೇ […]
ಆದಿತ್ಯ ಠಾಕ್ರೆ ಕಾರಿನ ಮೇಲೆ ಕಲ್ಲು ತೂರಾಟ

ಔರಂಗಾಬಾದ್,ಫೆ.8- ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ನಡೆದಿದೆ. ಶಿವಸಂವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಆದಿತ್ಯ ಠಾಕ್ರೆ ಅವರ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದನ್ನು ಶಿವಸೇನೆ ಮುಖಂಡ ಅಂಬಾದಾಸ್ ಧಾನ್ವೆ ಖಚಿತಪಡಿಸಿದ್ದಾರೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪತ್ನಿ ರಮಾಬಾಯಿ ಅಂಬೇಡ್ಕರ್ ಅವರ ಸ್ಮರಣಾರ್ಥ ಹಮ್ಮಿಕೊಂಡಿದ್ದ ಮೆರವಣಿಗೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. […]
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ಮಾಲ್ಡಾ,ಜ.4- ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲೂ ತೂರಾಟ ನಡೆಸಿದ್ದಾರೆ. ಮಾಲ್ಡಾದಿಂದ ಸುಮಾರು 50 ಕಿಲೋ ಮೀಟರ್ ದೂರದಲ್ಲಿರುವ ಕುಮರ್ ಗಂಜ್ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ. ವಂದೇ ಭಾರತ್ ಎಕ್ಸ್ಪ್ರೆಸ್ 22303 ರೈಲಿನ ಸಿ-13 ನಂಬರಿನ ಬೋಗಿಯ ಗಾಜುಗಳು ಹಾನಿಯಾಗಿವೆ ಎಂದು ರೈಲ್ವೆ ಅಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆ ನಡೆದ ನಂತರ ಮಾರ್ಗ ಮಧ್ಯದಲ್ಲಿ ರೈಲನ್ನು ನಿಲ್ಲಿಸಲಾಗಿದೆ ರೈಲ್ವೆ ಸುರಕ್ಷತಾ […]