ಪಾದಯಾತ್ರೆಗೆ ಹರಿದು ಬಂದ ಜನಸಾಗರ, ಕೋವಿಡ್ ರೂಲ್ಸ್ ಗಾಳಿಗೆ

ಸಂಗಮ,ಜ.9- ಮೇಕೆದಾಟು ನೀರಿಗಾಗಿ ನಡಿಗೆ ಪಾದಯಾತ್ರೆಗೆ ಜನ ಸಾಗರವೇ ಹರಿದುಬಂದಿತ್ತು. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಜನರ ಪಾಲ್ಗೊಳ್ಳುವಿಕೆಗೆ ಕೊರತೆಯಾಗಿರಲಿಲ್ಲ. ಸುಮಾರು 10 ಸಾವಿರ ಜನ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂಬ ನಿರೀಕ್ಷೆ ಕಾಂಗ್ರೆಸ್ ನಾಯಕರಲ್ಲಿ ಇತ್ತು. ಆದರೆ ಅದನ್ನು ಮೀರಿ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ದಾರಿಯುದ್ದಕ್ಕೂ ಕಿಕ್ಕಿರಿದು ತುಂಬಿದ್ದರು. ಪೆÇಲೀಸರಿಂದ ಅಡೆತಡೆಗಳು ಎದುರಾಗಬಹುದು ಎಂಬ ನಿರೀಕ್ಷೆಗಳು ಹುಸಿಯಾಗುತ್ತಿದ್ದಂತೆ ಕಾರ್ಯಕರ್ತರ ಉತ್ಸಾಹ ಇನ್ನಷ್ಟು ಇಮ್ಮಡಿಯಾಗಿತ್ತು. ದ್ವಿಚಕ್ರ ವಾಹನಗಳಲ್ಲಿ, ಖಾಸಗಿ ವಾಹನಗಳಲ್ಲಿ ಪಾದಯಾತ್ರೆ ಆರಂಭದ […]