ಚುನಾವಣಾ ಆಯೋಗದ ಅನುಮತಿಯಿಲ್ಲದೆ ಅಧಿಕಾರಿಗಳ ವರ್ಗಾವಣೆ ಮಾಡುವಂತಿಲ್ಲ

ಬೆಂಗಳೂರು,ಮಾ.16- ಇನ್ನು ಮುಂದೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಕೂಡದು ಎಂದು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಎಚ್ಚರಿಕೆ ಕೊಟ್ಟಿದೆ. ಈ ಸಂಬಂಧ ರಾಜ್ಯ ಚುನಾವಣಾಕಾರಿ ಮನೋಜ್ಕುಮಾರ್ ಮೀನಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪತ್ರ ಬರೆದಿದ್ದು, ಆಯೋಗದ ಅನುಮತಿ ಪಡೆಯದೆ ವರ್ಗಾವಣೆಗೊಳಿಸಿದರೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಶೀಘ್ರದಲ್ಲೇ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಿದ್ದು, ಚುನಾವಣಾ […]