ರಾಜಕೀಯ ಪಕ್ಷಗಳಿಗೆ ಮತ್ತಷ್ಟು ಸಂಕಷ್ಟ : ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳ ಕುರಿತು ಸುಪ್ರೀಂಗೆ ಅರ್ಜಿ

ಹೊಸದಿಲ್ಲಿ,ಜ.17- ಎಲ್ಲಾ ರಾಜಕೀಯ ಪಕ್ಷಗಳು ಕ್ರಿಮಿನಲ್ ಹಿನ್ನೆಲೆಯಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಕ್ಕೆ ಸಕಾರಣಗಳನ್ನು ಸಾರ್ವಜನಿಕವಾಗಿ ತಮ್ಮ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲು ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಸುಪ್ರೀಂಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಹಿರಿಯ ವಕೀಲ ಅಶ್ವಿನ್ ಕುಮಾರ್ ದುಬೆ ಅವರ ಮೂಲಕ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ಪ್ರಕಾರ ಪ್ರತಿ ರಾಜಕೀಯ ಪಕ್ಷವು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ವ್ಯಕ್ತಿಗೆ ಏಕೆ […]