ಬಿಎಂಟಿಸಿ ಬಸ್ ಅಪಘಾತ, ಪಿಜಿ ವಿದ್ಯಾರ್ಥಿನಿ ಗಂಭೀರ

ಬೆಂಗಳೂರು,ಅ.10- ಬಿಎಂಟಿಸಿ ಬಸ್ ಹತ್ತುತ್ತಿದ್ದಂತೆ ಮುಂದೆ ಚಲಿಸಿದ ಪರಿಣಾಮ ಕೆಳಗೆ ಬಿದ್ದ ಪಿಜಿ ವಿದ್ಯಾರ್ಥಿನಿ ಮೇಲೆ ಬಸ್ ಚಕ್ರ ಹರಿದು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಪ್ರಥಮ ವರ್ಷದ ಗಣಿತ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ, ಕೋಲಾರ ಮೂಲದ ಶಿಲ್ಪಾ ಗಂಭೀರ ಗಾಯಗೊಂಡಿದ್ದು, ಅವರನ್ನು ಪೋರ್ಟಿಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಂಗಳೂರು ವಿವಿ ಜ್ಞಾನಭಾರತಿ ಆವರಣದಲ್ಲಿ ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಶಿಲ್ಪಾ ಅವರು ಬಿಎಂಟಿಸಿ […]