ಸೋಶಿಯಲ್ ಮೀಡಿಯಾ ಖಾತೆಗಳ ಪ್ರೊಫೈಲ್‍ಗೆ ರಾಷ್ಟ್ರಧ್ವಜ ಹಾಕಲು ಪ್ರಧಾನಿ ಕರೆ

ನವದೆಹಲಿ,ಜು.17- ಅಜಾದಿ ಕಾ ಅಮೃತ ಮಹೋತ್ಸವ ಸಂದರ್ಭದಲ್ಲಿ ಆ.2ರಿಂದ 15ರ ನಡುವೆ ದೇಶದ ಪ್ರತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿನ ತಮ್ಮ ಖಾತೆಗಳ ಪ್ರೊಫೈಲ್‍ಗೆ ತ್ರಿವರ್ಣ ಧ್ವಜ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್‍ನ 91ನೇ ಸರಣಿಯಲ್ಲಿ ಮಾತನಾಡಿದ ಅವರು, ಭಾರತ ಐತಿಹಾಸಿಕ ಮತ್ತು ಶ್ರೀಮಂತ ಪರಂಪರೆಯ ಕ್ಷಣಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ವಿಶೇಷ ಅಭಿಯಾನ ಕೂಡ ನಡೆಯುತ್ತಿದೆ. […]