ಕೇಂದ್ರ ಸರ್ಕಾರ ಕನ್ನಡಿಗರ ಹಕ್ಕು ಕಸಿಯುತ್ತಿದೆ : ಹೆಚ್‌ಡಿಕೆ

ಬೆಂಗಳೂರು,ನ.18- ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ ನೀರಿನ ವಿಷಯದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಕನ್ನಡಿಗರ ಹಕ್ಕು ಕಸಿದು ಕಿರುಕುಳ ನೀಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾೀಧಿಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ಅಕ್ಷರಶಃ ರಾಜ್ಯದ ಪಾಲಿಗೆ ಮರಣಶಾಸನವಾಗಿದೆ.ಇದನ್ನು ರಾಜ್ಯ ಸರ್ಕಾರ ಮುಲಾಜಿಲ್ಲದೆ ವಿರೋಧಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಪಾಲಿಗೆ ಮಾರಕ […]