ಇ-ಕಾಮರ್ಸ್ ದೈತ್ಯ ಅಮೆಜಾನ್‍ಗೆ ಸಂಕಷ್ಟ

ನವದೆಹಲಿ,ನ.25- ವಿಶ್ವದಲ್ಲಿ ಮುಂಚೂಣಿಯಲ್ಲಿರುವ ಆನ್‍ಲೈನ್ ಮಾರಾಟ ಸಂಸ್ಥೆಯಾದ ಅಮೆಜಾನ್ ಇಕ್ಕಟ್ಟಿಗೆ ಸಿಲುಕಿಕೊಂಡಿದೆ. ಸುಮಾರು 40 ದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಮೆಜಾನ್ ಸಿಬ್ಬಂದಿ ವರ್ಗದವರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ಹಾದಿ ಹಿಡಿದಿರುವ ಹಿನ್ನಲೆಯಲ್ಲಿ ಅಮೆಜಾನ್ ವ್ಯಾಪಾರ ವಹಿವಾಟುಗಳ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಭಾರತ, ಅಮೆರಿಕಾ, ಜಪಾನ್, ಆಸ್ಟ್ರೇಲಿಯಾ ಸೇರಿದಂತೆ ಸುಮಾರು 40 ದೇಶಗಳ ಅಮೆಜಾನ್ ವೇರ್‍ಹೌಸ್‍ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಸಿಬ್ಬಂದಿಗಳು ಮೇಕ್ ಅಮೆಜಾನ್ ಪೇ ಎಂಬ ಅಭಿಯಾನದ ಮೂಲಕ ವೇತನ ಹೆಚ್ಚಳ ಸೇರಿದಂತೆ ಹಲವಾರು […]

ಸಿದ್ದು ಸಿದ್ದರಾಮೋತ್ಸವಕ್ಕೆ ಠಕ್ಕರ್ ಕೊಡಲು ಪರ್ಯಾಯ ಉತ್ಸವಕ್ಕೆ ಬಿಜೆಪಿ ಸಜ್ಜು

ಬೆಂಗಳೂರು,ಆ.5- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮ ದಿನೋತ್ಸವ ಭರ್ಜರಿ ಯಶಸ್ವಿಯಾದ ಬೆನ್ನಲ್ಲೇ ಬಿಜೆಪಿ ಕೂಡ ಪರ್ಯಾಯವಾಗಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದೆ. ಹುಬ್ಬಳ್ಳಿ, ಮಂಗಳೂರು ಇಲ್ಲವೇ ಮೈಸೂರು ಕರ್ನಾಟಕ ಭಾಗದಲ್ಲಿ ಭರ್ಜರಿ ಕಾರ್ಯಕರ್ತರ ಸಮಾವೇಶ ನಡೆಸಬೇಕೆಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ಕೇಳಿಬಂದಿದೆ. ಗುರುವಾರ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಸಮಾವೇಶ ನಡೆಸಲು ಒಪ್ಪಿಗೆ ಸೂಚಿಸಿದ್ದು, ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಲು ಸಮಾವೇಶದ ಅಗತ್ಯತೆಯನ್ನು ಪಕ್ಷದ ಮುಖಂಡರು ಮನವರಿಕೆ ಮಾಡಿಕೊಟ್ಟಿದ್ದಾರೆ. ದಕ್ಷಿಣ ಕನ್ನಡ […]