ಮಹಾರಾಷ್ಟ್ರದಲ್ಲೂ ಲವ್ ಜಿಹಾದ್ ವಿರುದ್ಧ ಕಾನೂನಾಸ್ತ್ರ ಜಾರಿ..?

ಮುಂಬೈ,ಡಿ.29- ಕರ್ನಾಟಕ, ಗುಜರಾತ್, ಮಧ್ಯಪ್ರದೇಶ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮತಾಂತರ ವಿರೋಧಿ ಕಾನೂನು ಜಾರಿಗೆ ತರುವಂತೆ ಒತ್ತಾಯ ಹೆಚ್ಚಾಗುತ್ತಿದೆ. ಮಹಿಳಾ ನಿಯೋಗದೊಂದಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ ಬಿಜೆಪಿ ಶಾಸಕ ನಿತೇಶ್ ರಾಣೆ ಅವರು ಈ ಒತ್ತಾಯ ಮಾಡಿದ್ದಾರೆ. ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನಿಗೆ ಒತ್ತಾಯಿಸಿ ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸುತ್ತಿವೆ. ಮಹಿಳಾ ನಿಯೋಗದೊಂದಿಗೆ ನಾವು ಮುಖ್ಯಮಂತ್ರಿ ಏಕನಾಥ್ ಶಿಂಧೆ […]

ಅಮೆರಿಕದ ಶ್ವೇತಭವನದಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ..!

ಕೀವ್,ಡಿ.21-ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ರಷ್ಯಾ ತೀವ್ರತರ ದಾಳಿ ಮುಂದುವರೆಸಿರುವ ಸಂದರ್ಭದಲ್ಲಿ ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಅವರು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರನ್ನು ಭೇಟಿಯಾಗಲು ತೀರ್ಮಾನಿಸಿದ್ದಾರೆ. ಕಳೆದ ಫೆಬ್ರವರಿಯಿಂದಲೇ ರಷ್ಯಾ ಉಕ್ರೇನ್ ಮೇಲೆ ನಿರಂತರ ದಾಳಿ ನಡೆಸುತ್ತಲೆ ಬಂದಿದೆ. ಆದರೆ, ಇದುವರೆಗೂ ವಿದೇಶ ಪ್ರವಾಸ ಕೈಗೊಳ್ಳದ ಅಧ್ಯಕ್ಷರು ಇದೇ ಮೊದಲ ಬಾರಿಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ. ಉಭಯ ನಾಯಕರು ಶ್ವೇತಭವನದಲ್ಲಿ ಭೇಟಿಯಾಗುವ ನಿರೀಕ್ಷೆಯಿದೆ. ಝೆಲೆನ್ಸ್ಕಿಯವರ ಭೇಟಿಯ ನಂತರ […]

ಶಿಂಧೆ ಬಣದ 22ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ..?

ಮುಂಬೈ,ಅ.24- ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ 22ಕ್ಕೂ ಹೆಚ್ಚು ಶಾಸಕರು ಅಸಮಾಧಾನಗೊಂಡಿದ್ದು, ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಇತ್ತೀಚೆಗೆ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಾಸಕರು ಶಿವಸೇನೆಯಿಂದ ಚದುರಿ ಹೋಗಿದ್ದರು. ಈ ಮೂಲಕ ಶಿವಸೇನೆ ಕಾಂಗ್ರೆಸ್, ಎನ್‍ಸಿಪಿ ನೇತೃತ್ವದ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗಿತ್ತು. ಬಿಜೆಪಿ ಶಿವಸೇನೆಯ ಭಿನ್ನರ ಗುಂಪು ಮೈತ್ರಿಯಲ್ಲಿ ನೂತನ ಸರ್ಕಾರ ರಚನೆಯಾಗಿದೆ. ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ […]