ಮಹಾರಾಷ್ಟ್ರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನೀತಿ ಪರಿಷ್ಕರಣೆ

ಮುಂಬೈ,ಡಿ.3- ಪ್ಲಾಸ್ಟಿಕ್ ಜಾಗತಿಕ ವೈರಿಯಾಗಿದ್ದು ಹಲವು ದೇಶಗಳು ಇದರ ಮೇಲೆ ನಿಷೇಧ ಹೇರಿವೆ. ಭಾರತದಲ್ಲೂ ಬಹುತೇಕ ರಾಜ್ಯಗಳು ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿವೆ. ಸುಪ್ರೀಂಕೋರ್ಟ್ ಪದೇ ಪದೇ ಪ್ಲಾಸ್ಟಿಕ್ ಬಳಕೆ ನಿರ್ಬಂಧಗಳ ಕುರಿತು ಪ್ರಸ್ತಾಪಿಸುತ್ತಲೇ ಇದೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಕರಗಬಹುದಾದ ಪ್ಲಾಸ್ಟಿಕ್‍ನಿಂದ ಕೆಲ ವಸ್ತುಗಳ ತಯಾರಿಕೆಗೆ ಅನುಮತಿ ನೀಡಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ನೇತೃತ್ವದಲ್ಲಿ ನಡೆದ ಸಮಿತಿ, ಏಕಬಳಕೆಯ ಪ್ಲಾಸ್ಟಿಕ್ ನೀತಿಯನ್ನು ಪರಿಷ್ಕರಣೆ ಮಾಡಿದೆ. ಮಹಾರಾಷ್ಟ್ರದ ಪರಿಸರ ಮತ್ತು ಹವಾಮಾನ ಬದಲಾವಣೆ […]

ಪ್ಲಾಸ್ಟಿಕ್ ಮುಕ್ತವಾಗಿರಲಿದೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು,ನ.27- ಜನವರಿ 6ರಿಂದ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನವು ಪ್ಲಾಸ್ಟಿಕ್ ಮುಕ್ತವಾಗಿರಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ 3ರಿಂದ 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಪ್ಲಾಸ್ಟಿಕ್ ವಸ್ತುಗಳನ್ನು ದೂರವಿಡುವ ಮೂಲಕ ಇದನ್ನು ಯಶಸ್ವಿಯಾಗಿಸಲು ಸಂಘಟನಾ ಸಮಿತಿ ಶ್ರಮಿಸುತ್ತಿದೆ. ಪ್ರಕೃತಿಯನ್ನು ಬೆಂಬಲಿಸಲು ಮತ್ತು ದೊಡ್ಡ ಕಾರ್ಯಕ್ರಮಗಳಿಂದ ಪ್ಲಾಸ್ಟಿಕ್ ಬಳಕೆಯನ್ನು ತೊಡೆದುಹಾಕಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಮರುಬಳಕೆ ಮಾಡಬಹುದಾದ ಉತ್ಪನ್ನಗಳನ್ನು ಬಳಸಲು ನಿರ್ಧರಿಸಿದೆ. ಕೋವಿಡ್-19 ಸಾಂಕ್ರಾಮಿಕದಿಂದಾಗಿ ಎರಡು ವರ್ಷಗಳ ಬಳಿಕ […]

ಪ್ಲಾಸ್ಟಿಕ್ ನಿರ್ವಹಣೆಗೆ ಕಟ್ಟು ನಿಟ್ಟಿನ ಕ್ರಮ

ಬೆಂಗಳೂರು,ಸೆ.19- ಪರಿಸರಕ್ಕೆ ಗಂಭೀರ ಸವಾಲೊಡ್ಡುವ ಪ್ಲಾಸ್ಟಿಕ್ ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು. ವಿಧಾನಪರಿಷತ್‍ನಲ್ಲಿ ಸದಸ್ಯರಾದ ಮುನಿರಾಜು ಗೌಡ ಮತ್ತು ಪ್ರಕಾಶ್ ಕೆ.ರಾಥೋಡ್ ಅವರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಪ್ರತಿದಿನ 830.36 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಅದರಲ್ಲಿ ಬೆಂಗಳೂರುವೊಂದರಲ್ಲೆ 317.42 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ ಎಂದರು. 2016 ಮಾರ್ಚ್ 11ರಂದು ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹಣೆ, […]

‘ಪೂರ್ವ ತಯಾರಿ ಇಲ್ಲದೆ ಕೇಂದ್ರ ಸರ್ಕಾರ ಪ್ಲಾಸ್ಟಿಕ್ ನಿಷೇಧ ಮಾಡಿದೆ’

ನವದೆಹಲಿ, ಜು.16- ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಸಿರುವ ಕೇಂದ್ರ ಸರ್ಕಾರ ಅಗತ್ಯವಾದ ಪೂರ್ವ ತಯಾರಿಗಳನ್ನು ಮಾಡಿಕೊಂಡಿಲ್ಲ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ. ಪ್ರಾಸ್ಟಿಕ್ ನಿಷೇಧವನ್ನು ಜಾರಿಗೆ ತರುವ ಮೊದಲು ಕೇಂದ್ರ ಸರ್ಕಾರ ರಾಜ್ಯ ಪರಿಸರ ಸಚಿವರ ಸಭೆ ನಡೆಸಿಲ್ಲ. ಪೂರ್ವಸಿದ್ಧತೆ ಕೊರತೆಯಿಂದ ಏಕಾಏಕಿ ಜಾರಿಗೆ ತರಲಾಗಿದೆ ಎಂದು ಆಕ್ಷೇಪಿಸಿದ್ದಾರೆ. ಪ್ಲಾಸ್ಟಿಕ್ ಬದಲಿಗೆ ಜನರಿಗೆ ಪರ್ಯಾಯಗಳನ್ನು ಒದಗಿಸಬೇಕಿದೆ ಮತ್ತು ಉತ್ಪಾದನಾ ಘಟಕಗಳನ್ನು ಹಸಿರು ವಲಯಗಳನ್ನಾಗಿ ಬದಲಾಯಿಸಬೇಕಿದೆ. ಅದನ್ನು ಬಿಟ್ಟು ಏಕಾಏಕಿ ನಿಷೇಧ ಮಾಡಿ […]