ಮಂಗರ್ ಧಾಮ್ ಪ್ರದೇಶವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸಿದ ಪ್ರಧಾನಿ ಮೋದಿ

ಮಂಗರ್, ನ.1- ರಾಜಸ್ಥಾನದ ಬನ್ಸವಾರ ಜಿಲ್ಲೆಯ ಮಂಗರ್ ಧಾಮ್ ಪ್ರದೇಶವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಣೆ ಮಾಡಿದ್ದಾರೆ. ರಾಜಸ್ಥಾನ ಮತ್ತು ಗುಜರಾತ್‍ನ ಗಡಿ ಭಾಗದ ಮಂಗರ್‍ನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‍ಸಿಂಗ್ ಚೌಹಾಣ್, ಗುಜರಾತ್‍ನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬುಡಕಟ್ಟು ಸಮುದಾಯದ ಜನರ ಸಾಮೂಹಿಕ ಹತ್ಯೆಯಾದ ಮಂಗರ್‍ಧಾಮ್ ಪ್ರದೇಶವನ್ನು ಪ್ರಧಾನಿ ಅವರು ರಾಷ್ಟ್ರೀಯ ಸ್ಮಾರಕವನ್ನಾಗಿ […]