ಆಪರೇಷನ್ ಗಂಗಾ ಮತ್ತಷ್ಟು ಚುರುಕು, ಪ್ರಧಾನಿ ನೇತೃತ್ವದಲ್ಲಿ ಮಹತ್ವದ ಸಭೆ

ನವದೆಹಲಿ, ಮಾ.4- ಉಕ್ರೇನ್‍ನಲ್ಲಿರುವ ಭಾರತೀಯರ ಪರಿಸ್ಥಿತಿ ಮತ್ತು ಸ್ಥಳಾಂತರ ಕಾರ್ಯಚರಣೆ ಕುರಿತು ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆಪರೇನ್ ಗಂಗಾ ಕಾರ್ಯಾಚರಣೆಯನ್ನು ಪೂರ್ಣಪ್ರಮಾಣದಲ್ಲಿ ಚುರುಕುಗೊಳಿಸುವಂತೆ ಸೂಚಿಸಿದ್ದಾರೆ. ವಿದೇಶಾಂಗ ಸಚಿವ ಎಸ್.ಜೈಶಂಕರ್, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವಧನ್ ಶ್ರಿಂಗಾಲ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೇವೋಲ್ ಮತ್ತಿತರು ಉಪಸ್ಥಿತರಿದ್ದರು. ಪ್ರಧಾನಿಗಳು ಆಪರೇಷನ್ ಗಂಗಾ ಕಾರ್ಯಾಚರಣೆ ಪ್ರಗತಿ ಪರಿಶೀಲನೆಗೆ ಪದೇ ಪದೇ ಸಭೆಗಳನ್ನು ನಡೆಸುತ್ತಲೇ ಇದ್ದಾರೆ. […]