ಜನತೆಗೆ ಹೊಸ ವರ್ಷದ ಶುಭಾಶಯ: ಪ್ರಧಾನಿ ಮೋದಿ

ನವದೆಹಲಿ, ಜ.1- ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರಿಗೂ ಸಂತೋಷ ಮತ್ತು ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸಿದ್ದಾರೆ. ಹ್ಯಾಪಿ 2022! ಈ ವರ್ಷವು ಪ್ರತಿಯೊಬ್ಬರ ಜೀವನದಲ್ಲೂ ಸಂತಸ ಮತ್ತು ಉತ್ತಮ ಆರೋಗ್ಯ ತಂದುಕೊಡುವಂತಾಗಲಿ. ನಾವು ಪ್ರಗತಿ ಮತ್ತು ಸಮೃದ್ಧಿಯ ಹೊಸ ಔನ್ನತ್ಯಗಳನ್ನು ಏರುವಂತಾಗಲಿ ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸುವತ್ತ ನಾವು ಇನ್ನಷ್ಟು ಪರಿಶ್ರಮದಿಂದ ಕಾರ್ಯನಿರ್ವಹಿಸೋಣ ಎಂದು ಮೋದಿ ಟ್ವಿಟ್ ಮಾಡಿದ್ದಾರೆ.