ಬಾಲ ಪುರಸ್ಕಾರ ಪ್ರಶಸ್ತಿ ವಿಜೇತರೊಂದಿಗೆ ನಾಳೆ ಪ್ರಧಾನಿ ಸಂವಾದ

ನವದೆಹಲಿ, ಜ.23- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್‍ಬಿಪಿ) ಪುರಸ್ಕೃತರೊಂದಿಗೆ ನಾಳೆ ವೀಡಿಯೊ ಕಾನರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಜ್ಯ ಸಚಿವರಾದ ಡಾ. ಮುಂಜಪರಾ ಮಹೇಂದ್ರಭಾಯಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ. 5 ವರ್ಷಕ್ಕಿಂತ ಮೇಲ್ಪಟ್ಟ 18 ವರ್ಷ ಮೀರಿರದ ಬಾಲಕರು ಮತ್ತು ಪ್ರೌಢಾವಸ್ಥೆಯಲ್ಲಿರುವವರ ಅಸಾಧಾರಣ ಸಾಧನೆ ಗುರುತಿಸಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡಲಾಗುತ್ತದೆ. ವಿದ್ವತ್ಪೂರ್ಣ ಸಾಧನೆಗಳು, […]