ರಾಜ್ಯಕ್ಕೆ ಪ್ರಧಾನಿ ಆಗಮನ, ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಭರ್ಜರಿ ತಯಾರಿ

ಮಂಗಳೂರು, ಸೆ.1- ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು, ಒಂದು ಲಕ್ಷಕ್ಕೂ ಮೇಲ್ಪಟ್ಟು ಜನರು ಸೇರುವ ನಿರೀಕ್ಷೆ ಇದೆ. ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಬಳಿಕ ಈ ಸಮಾವೇಶ ನಡೆಯಲಿದೆ. ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ವಿಶೇಷ ಲಕ್ಷ್ಯ ನೀಡುತ್ತಿದೆ.ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮದ ಖುದ್ದು […]