‘ಗತಿಶಕ್ತಿ’ಯಿಂದ ಬದಲಾಗಲಿದೆ ದೇಶದ ದಿಕ್ಕು: ಪ್ರಧಾನಿ ಮೋದಿ

ನವದೆಹಲಿ, ಫೆ.28- ಉತ್ತಮ ಸಮನ್ವಯ ಮತ್ತು ಮೇಲ್ವಿಚಾರಣೆಯ ಮೂಲಕ ದೇಶದಲ್ಲಿ ಆಧುನಿಕ ಮೂಲಸೌಕರ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಪ್ರಧಾನಮಂತ್ರಿ ಗತಿ ಶಕ್ತಿ ಉಪಕ್ರಮವು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯೋಜನೆ ಕುರಿತು ಉದ್ಯಮ ಮತ್ತು ಆಂತರಿಕ ವ್ಯಾಪಾರದ ಮಧ್ಯಸ್ಥಗಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾಸಗಿ ವಲಯವನ್ನು ಸರ್ಕಾರದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಲು ಮತ್ತು ಹೂಡಿಕೆಗಳನ್ನು ಹೆಚ್ಚಿಸಲು ಪ್ರಧಾನಮಂತ್ರಿ ಗತಿ ಶಕ್ತಿ ನೆರವಾಗಲಿದೆ. ಗತಿಶಕಕ್ತಿ ರಾಷ್ಟ್ರೀಯ ಯೋಜನೆಯನ್ನು ಕಳೆದ ವರ್ಷ ಘೋಷಿಸಲಾಗಿದ್ದು, ಇಲಾಖೆಗಳ ನಡುವಿನ ಅಂತರವನ್ನು […]