ಪ್ರಧಾನಿ ಭದ್ರತಾ ಲೋಪದ ಹಿಂದೆ ಗಡಿಗಾಚೆಗಿನ ಭಯೋತ್ಪಾದನೆ ಹುನ್ನಾರ..?

ನವದೆಹಲಿ,ಜ.7- ಪ್ರಧಾನಮಂತ್ರಿಯವರ ಸುರಕ್ಷತಾ ನಿಯಮಗಳ ಉಲ್ಲಂಘನೆ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದರ ಹಿಂದೆ ಗಡಿಗಾಚೆಗಿನ ಭಯೋತ್ಪಾದನೆಯ ಹುನ್ನಾರ ಇರುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ವಾದಿಸಿದ್ದು, ಘಟನೆಗೆ ಸಂಬಂಧಪಟ್ಟಂತೆ ಎಲ್ಲ ಸಾಕ್ಷ್ಯಾ ಪುರಾವೆಗಳನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ಲಾಯರ್ಸ್ ವಾಯ್ಸ್ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನೊಳಗೊಂಡ ವಿಭಾಗೀಯ ಪೀಠ ಸೋಮವಾರದವರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಚಿಸಿರುವ ಸಮಿತಿಗಳು […]