ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಾಜಕೀಯ ಬದ್ಧ ವೈರಿಗಳು

ನವದೆಹಲಿ,ಡಿ.6- ಪ್ರತಿನಿತ್ಯ ರಾಜಕೀಯ ಕೆಸರೆರೆಚಾಟದಲ್ಲಿ ತೊಡಗುವ ರಾಜಕಾರಣಿಗಳು ಇಂದು ಎಲ್ಲ ವೈಮನಸ್ಯಗಳನ್ನು ತೊರೆದು ಒಂದೇಡೆ ಸೇರಿ ದೇಶದ ಅಭಿವೃದ್ಧಿ ಬಗ್ಗೆ ಚರ್ಚಿಸಿರುವುದು ವಿಶೇಷವಾಗಿದೆ. ನಮ್ಮ ದೇಶಕ್ಕೆ ಜಿ-20 ಅಧ್ಯಕ್ಷ ಸ್ಥಾನ ದಕ್ಕಿರುವುದರಿಂದ ಇಂತಹ ಅದ್ಬುತ ಅವಕಾಶ ಲಭಿಸಿದೆ. ಹೌದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಎಲ್ಲ ವಿಪಕ್ಷ ನಾಯಕರು ಪಾಲ್ಗೊಂಡು ತಮ್ಮ ಅಭಿಪ್ರಾಯ ಹಂಚಿಕೊಂಡರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ಬಂಗಾಳ […]

ಜಿ-20 ಶೃಂಗ : ಪ್ರಧಾನಿ ಮೋದಿಗೆ ಸಲಹೆ ಕೊಟ್ಟ ದೇವೇಗೌಡರು

ಬೆಂಗಳೂರು,ಡಿ.6-ಭೌಗೋಳಿಕ ಸಂಘರ್ಷಮಯ ವಾತಾವರಣದ ನಡುವೆಯೂ ಆಹಾರ, ರಸಗೊಬ್ಬರ, ವೈದ್ಯಕೀಯ ಉತ್ಪನ್ನಗಳ ಸರಬರಾಜನ್ನು ರಾಜಕೀಯ ಮುಕ್ತಗೊಳಿಸಲು ಪ್ರಯತ್ನಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ಮಾಡಿದ್ದಾರೆ. ಭಾರತವು ಜಿ-20 ಶೃಂಗ ರಾಷ್ಟ್ರಗಳ ಕೂಟದ ಅಧ್ಯಕ್ಷತೆ ವಹಿಸಿಕೊಂಡ ಸಂದರ್ಭದಲ್ಲಿ ಅನುಸರಿಸಬೇಕಾದ ಕಾರ್ಯಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸಲು ನಿನ್ನೆ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿರುವ ದೇವೇಗೌಡರು ಪಾಲ್ಗೊಂಡಿದ್ದು, ಕೆಲವು ಸಲಹೆಗಳನ್ನು ನೀಡಿದ್ದಾರೆ. ಆ ಸಲಹೆಗಳ ಅಂಶಗಳನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ. ಜಿ-20 ಶೃಂಗದ ಅಧ್ಯಕ್ಷತೆ […]

ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಹುಟ್ಟು ಹಬ್ಬದ ಶುಭ ಕೋರಿದ ಪ್ರಧಾನಿ

ನವದೆಹಲಿ, ನ.8- ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ಅವರ 95ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರು ಶುಭ ಹಾರೈಸಿದ್ದಾರೆ. ಬೆಳಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‍ರೊಂದಿಗೆ ಅಡ್ವಾನಿ ಅವರ ಮನೆಗೆ ಭೇಟಿ ನೀಡಿದ ಪ್ರಧಾನಿ ಕೆಲ ಕಾಲ ಆತ್ಮೀಯ ಸಮಾಲೋಚನೆ ನಡೆಸಿದರು. ಇದೇ ವೇಳೆ ಟ್ವೀಟ್ ಮಾಡಿರುವ ಪ್ರಧಾನಿ ಬಿಜೆಪಿ ಇಂದು ದೇಶದಲ್ಲಿ ಪ್ರಬಲ ಶಕ್ತಿಯಾಗಿ ಹೊರ ಹೊಮ್ಮಲು ಅಡ್ವಾಣಿ ಪ್ರಧಾನ ಶಿಲ್ಪಿಯಾಗಿದ್ದಾರೆ ಎಂದು […]