ಪ್ರಧಾನಿ ಮೋದಿ ಮನ್ ಕೀ ಬಾತ್ ಕಾರ್ಯಕ್ರಮದ ಹೈಲೈಟ್ಸ್

ನವದೆಹಲಿ,ಜ.29- ಯೋಗ ಮತ್ತು ಸಿರಿಧಾನ್ಯಬಳಕೆಯನ್ನು ತಮ್ಮ ಜೀವನಶೈಲಿಗೆ ಅಳವಡಿಸಿಕೊಳ್ಳಬೇಕು ಎಂದು ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದಾರೆ. ಆಕಾಶವಾಣಿಯಲ್ಲಿ ಇಂದು ತಮ್ಮ 97ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಮಹತ್ವ ,ಹವಾಮಾನ ಬದಲಾವಣೆ, ಇತ್ಯಾಜ್ಯ ಗಂಭೀರ ಸಮಸ್ಯೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ರಾಗಿ ಸೇರಿದಂತೆ ಸಿರಿಧಾನ್ಯಗಳು ಜನರ ಆರೋಗ್ಯ ಹೆಚ್ಚಿಸುತ್ತದೆ,ತಮ್ಮ ಆರೋಗ್ಯಪಾಲನೆಗೆ ಸಿರಿಧಾನ್ಯಗಳ ಸೇವನೆಗೆ ಹೆಚ್ಚು ಒತ್ತುಕೊಡಬೇಕು ಎಂದರು. ಭಾರತದ ಮನವಿ ಮೇರೆಗೆ ವಿಶ್ವಸಂಸ್ಥೆಯು ಅಂತಾರಾಷ್ಟ್ರೀಯ ಯೋಗ ದಿನ ಮತ್ತು ಅಂತಾರಾಷ್ಟ್ರೀಯ ಸಿರಿಧಾನ್ಯ […]

ದೇಶದ ಹಲವೆಡೆ ವಿವಾದಾತ್ಮಕ ಬಿಬಿಸಿ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಪ್ರಯತ್ನ

ಮುಂಬೈ,ಜ.29- ಗುಜರಾತ್‍ನಲ್ಲಿ 2002ರಲ್ಲಿ ನಡೆದ ಹತ್ಯಾಖಾಂಡ ಆಧರಿಸಿದ ಬಿಬಿಸಿಯ ಸಾಕ್ಷ್ಯ ಚಿತ್ರವನ್ನು ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ನಡೆಸಿದ ಬಳಿಕ ಈಗ ಒಂದೊಂದಾಗಿ ಇತರ ಭಾಗದಲ್ಲಿ ಪ್ರದರ್ಶನಗಳಿಗೆ ತಯಾರಿಗಳು ನಡೆದಿವೆ. ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್‍ಎಸ್)ನಲ್ಲಿ ಪ್ರದರ್ಶನ ಆಯೋಜಿಸಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ನಿಷೇಸಿರುವುದನ್ನು ಸಾಂಕೇತಿಕವಾಗಿ ವಿರೋಸಿ ಪ್ರಗತಿಶೀಲ ವಿದ್ಯಾರ್ಥಿಗಳ ವೇದಿಕೆ (ಪಿಎಸ್‍ಎಫ್) ಪ್ರದರ್ಶನ ಆಯೋಜಿಸಿತ್ತು. ಇದಕ್ಕೆ […]

ದೇಶದ ಜನರ ನಡುವೆ ಬಿರುಕು ಮೂಡಿಸುವ ಯತ್ನಗಳು ನಡೆಯುತ್ತಿವೆ, ಎಚ್ಚರದಿಂದಿರಿ : ಮೋದಿ

ನವದೆಹಲಿ,ಜ.29-ಬಿಬಿಸಿ ಸಾಕ್ಷ್ಯಚಿತ್ರದಂತೆ ಒಂದಲ್ಲ ಒಂದು ನೆಪ ಹೂಡಿ ದೇಶದ ಜನರ ನಡುವೆ ಬಿರುಕು ಮೂಡಿಸುವ ಪ್ರಯತ್ನಗಳು ನಡೆಯುತ್ತಿವೆ ಆದರೆ ಅಂತಹ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿ ಕ್ಯಾಂಟ್‍ನ ಕರಿಯಪ್ಪ ಮೈದಾನದಲ್ಲಿ ನಡೆದ ಎನ್‍ಸಿಸಿ ರ್ಯಾಲಿಯಲ್ಲಿ ಮಾತನಾಡಿದ ಅವರು ಭಾರತವು ಶ್ರೇಷ್ಠತೆಯನ್ನು ಸಾಧಿಸಲು ಏಕತೆಯ ಮಂತ್ರವೊಂದೇ ಮಾರ್ಗವಾಗಿದೆ ಎಂದು ಹೇಳಿದರು. ದೇಶವನ್ನು ಒಡೆಯಲು ಹಲವು ಕಾರಣಗಳನ್ನು ಹುಡುಕಲಾಗುತ್ತಿದೆ. ನಾನಾ ವಿಷಯಗಳನ್ನು ಹೊರ ತೆಗೆಯುವ ಮೂಲಕ ಭಾರತ ಮಾತೆಯ ಮಕ್ಕಳ ನಡುವಿನಲ್ಲಿ ಬಿರುಕು ಮೂಡಿಸುವ […]

ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ : ಎಸ್.ಎಲ್.aಭೈರಪ್ಪ

ಮೈಸೂರು, ಜ.26- ಪದ್ಮಭೂಷಣ ಪ್ರಶಸ್ತಿ ನೀಡಿರುವುದಕ್ಕೆ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸಾಹಿತಿ ಎಸ್.ಎಲ್. ಭೈರಪ್ಪ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ನನಗೆ ಪದ್ಮಭೂಷಣ ಪ್ರಶಸ್ತಿ ಕೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಮೋದಿ ಸರ್ಕಾರವನ್ನು ನಾನು ಹೊಗಳುತ್ತಿಲ್ಲ. ನಾನು ಯಾವುದೇ ರಾಜಕೀಯ ಪಕ್ಷದಲ್ಲಿ ಇಲ್ಲ. ಯಾವುದೇ ಪಕ್ಷವನ್ನು ಓಲೈಸಲು ಈ ಮಾತು ಹೇಳುತ್ತಿಲ್ಲ. ದೇಶದ ಪ್ರಧಾನಿಯಾಗಿ ಮೋದಿಯವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಹಾಗಾಗಿ ಮೋದಿ ಅವರ ಸೇವೆ ಈ ದೇಶಕ್ಕೆ ಬೇಕಿದೆ. ಮೋದಿಯಂತಹ ಪ್ರಧಾನಿಯನ್ನು […]

ಮೋದಿ ವಿರುದ್ಧ ಬಿಲಾಲ್ ಹೇಳಿಕೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ

ನವದೆಹಲಿ,ಡಿ.17- ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿದ್ದ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾಲ್ ಭುಟ್ಟೋ ವಿರುದ್ಧ ದೇಶಾದ್ಯಂತ ಇಂದು ಪ್ರತಿಭಟನೆಗಳು ನಡೆದಿದ್ದು, ಭಾರೀ ಆಕ್ರೋಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ರಾಜಧಾನಿ ಕೇಂದ್ರ ಹಾಗೂ ಪ್ರಮುಖ ನಗರಗಳಲ್ಲಿ ಪ್ರತಿಭಟನೆಗಳು ವರದಿಯಾಗಿವೆ. ಮಹಾರಾಷ್ಟದ ಪುಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ಸ ಬವಾಂಕುಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಮುಂಬೈನಲ್ಲೂ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪಾಕಿಸ್ತಾನ ಮತ್ತು ಅಲ್ಲಿನ ವಿದೇಶಾಂಗ […]

ಅಪ್ಪು ಕನಸಿನ ಚಿತ್ರ ‘ಗಂಧದಗುಡಿ’ಗೆ ಶುಭಕೋರಿದ ಪ್ರಧಾನಿ ಮೋದಿ

ಬೆಂಗಳೂರು,ಅ.9- ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್( ಅಪ್ಪು) ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಿದ್ದಾರೆ. ಅವರು ತೇಜಸ್ಸಿನ ವ್ಯಕ್ತಿತ್ವ ಮತ್ತು ಅಪ್ರತಿಮ ಪ್ರತಿಭೆಯುಳ್ಳ ವ್ಯಕ್ತಿಯಾಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್‍ರವರ ಕೊನೆಯ ಸಾಕ್ಷಚಿತ್ರ ಗಂಧದಗುಡಿಗೆ ಶುಭಕೋರಿದ ಮೋದಿ, ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಸಂದ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳು ಎಂದು ಟೀಟ್ಟ್ ಮಾಡಿದ್ದಾರೆ. ಪುನೀತ್ ರಾಜ್‍ಕುಮಾರ್‍ರವರ ಪತ್ನಿ ಅಶ್ವಿನಿ […]

ನೆಹರೂ ಹಾರಿಸಿದ ತ್ರಿವರ್ಣ ಧ್ವಜದ ಚಿತ್ರ ಟ್ವೀಟ್ ಮಾಡಿದ ಮೋದಿ

ನವದೆಹಲಿ, ಜು 22- ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಅಥವಾ ಪ್ರದರ್ಶಿಸುವ ಮೂಲಕ ಹರ್ ಘರ್ ತಿರಂಗ ಆಂದೋಲನವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮನವಿ ಮಾಡಿದ್ದಾರೆ. ಈ ಆಂದೋಲನ ತ್ರಿವರ್ಣ ಧ್ವಜದೊಂದಿಗಿನ ನಮ್ಮ ಸಂಪರ್ಕವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.ನಾವು ಬ್ರಿಟೀಷರ ಕ್ರೂರ ಆಡಳಿತದ ವಿರುದ್ಧ ಹೋರಾಡುತ್ತಿರುವಾಗ ಮುಕ್ತ ಭಾರತಕ್ಕಾಗಿ ಧ್ವಜದ ಕನಸು ಕಂಡವರೆಲ್ಲರ ಧೈರ್ಯ-ಸಾಹಸ ಮತ್ತು ಪ್ರಯತ್ನಗಳನ್ನು ನಾವು ಇಂದು ನೆನಪಿಸಿಕೊಳ್ಳುತ್ತೇವೆ. ಅವರ ಕನಸುಗಳ ಭಾರತವನ್ನು ನಿರ್ಮಿಸಲು ನಾವು ನಮ್ಮ ಬದ್ಧತೆಯನ್ನು […]