ಮುರುಘಾ ಶ್ರೀ ವಿರುದ್ಧ ಪಿತೂರಿ, ಬಂಧಿತರಿಗೆ 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ,ನ.14- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀ ವಿರುದ್ಧ ಪಿತೂರಿ ನಡೆಸಿರುವ ಆರೋಪದ ಮೇಲೆ ಬಂಧಿತರಾಗಿರುವ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಸೋಮವಾರ ಅವರನ್ನು ಜಿಲ್ಲಾ ಒಂದನೇ ಹೆಚ್ಚುವರಿ ಜೆಎಂಎಫ್‍ಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾೀಧಿಶರು ಆರೋಪಿಗಳಾದ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದರು. […]

ಮುರುಘಾ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು: ಯಡಿಯೂರಪ್ಪ

ಉಡುಪಿ,ನ.8- ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮುರುಘಾ ಶರಣರಿಂದ ಲೈಂಗಿಕ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆಂದು ಅಂದುಕೊಂಡಿರಲಿಲ್ಲ. ಎಲ್ಲರೂ ಇದನ್ನು ಖಂಡಿಸಬೇಕು. ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು. ಇದೇ ವೇಳೆ ಸಿದ್ದರಾಮಯ್ಯ ಅವರ ವಿರುದ್ಧ […]

ನ.3ರ ವರೆಗೆ ಮುರುಘಾಶರಣರ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ,ಅ.21-ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನವನ್ನು ನ.3ರವರೆಗೆ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನದ ಅವ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಜಿಲ್ಲಾ 2ನೇ ಅಪರ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ನ.3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮುರುಘಾ ಶ್ರೀ, 2ನೇ ಆರೋಪಿ ವಾರ್ಡನ್ ರಶ್ಮಿ ಹಾಗೂ ಇತರ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದ […]

ಮುರುಘಾ ಶ್ರೀಗಳ ಪದಚ್ಯುತಿಗೆ ಹೆಚ್ಚಿದ ಒತ್ತಡ..

ಬೆಂಗಳೂರು,ಅ.15- ಪೋಕ್ಸೋ ಕಾಯ್ದೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘ ರಾಜೇಂದ್ರ ಶರಣರನ್ನು ಪೀಠಾಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಿ ಪರ್ಯಾಯ ಪೀಠಾಧ್ಯಕ್ಷರ ನೇಮಕಕ್ಕೆ ತಯಾರಿಗಳು ನಡೆಯುತ್ತಿವೆ. ಮುರುಘಾ ಶ್ರೀಗಳ ವಿರುದ್ಧ ದಿನಕ್ಕೊಂದು ನಂಬಲು ಅಸಾಧ್ಯವಾದ ಲೈಂಗಿಕ ಪ್ರಕರಣಗಳು ಹೊರ ಬರುತ್ತಿರುವ ಹಿನ್ನೆಲೆಯಲ್ಲಿ ಪೀಠದಿಂದ ಅವರನ್ನು ವಜಾಗೊಳಿಸಿ, ಹೊಸಬರನ್ನು ಪೀಠಾಧ್ಯಕ್ಷರನ್ನಾಗಿ ನೇಮಿಸಲು ಮಠದ ಹಾಗೂ ಸಾಮಾಜಿಕ ಒತ್ತಡ ಹೆಚ್ಚಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವ ಚಿತ್ರದುರ್ಗ ಮುರುಘಾ ಮಠದ […]

ಲೈಂಗಿಕ ದೌರ್ಜನ್ಯ ಪ್ರಕರಣ : ಶ್ರೀಗಳಿಗೆ ಬಂಧನ ಭೀತಿ

ಬೆಂಗಳೂರು,ಆ.28- ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಶರಣ ಸ್ವಾಮೀಜಿಗಳಿಗೆ ಬಂಧನದ ಭೀತಿ ಎದುರಾಗಿದೆ. ಶ್ರೀಗಳ ವಿರುದ್ಧ ಆರೋಪ ಮಾಡಿರುವ ಇಬ್ಬರು ಬಾಲಕಿಯರನ್ನು ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ. ವಿಚಾರಣೆ ಸಂದರ್ಭದಲ್ಲಿ ಬಾಲಕಿಯರು ಶ್ರೀಗಳ ವಿರುದ್ಧ ಹೇಳಿಕೆ ನೀಡಿದರೆ ಮುರುಘಾ ಶ್ರೀಗಳನ್ನು ಬಂಧಿಸಬೇಕಾದ ಅನಿವಾರ್ಯತೆ ಪೊಲೀಸರಿಗೆ ಎದುರಾಗುವ ಸಾಧ್ಯತೆಗಳಿವೆ. ನಾಳೆ ಜಿಲ್ಲಾ ನ್ಯಾಯಾೀಧಿಶರ ಮುಂದೆ ಬಾಲಕಿಯರನ್ನು ಹಾಜರುಪಡಿಸುವ ಸಾಧ್ಯತೆಯಿದ್ದು, ನ್ಯಾಯಾೀಧಿಶರು ಅವರಿಂದ ಹೇಳಿಕೆ ಪಡೆಯಲಿದ್ದಾರೆ. ಒಂದು ವೇಳೆ ಮಠದಲ್ಲಿ ತಮಗೆ ಆರೋಪಿ ಸ್ಥಾನದಲ್ಲಿರುವ […]