ಮುರುಘಾ ಶರಣರ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ, ಸೆ.1- ಚಿತ್ರದುರ್ಗದ ಮುರುಘಾ ಶರಣರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಚಿತ್ರದುರ್ಗದ ಒಂದನೆ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ವಾದಿ-ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಕಳೆದ ಐದು ದಿನಗಳ ಹಿಂದೆ ಬೆಳಕಿಗೆ ಬಂದ ಪ್ರಕರಣದಲ್ಲಿ ಶರಣರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು, ಮಧ್ಯಂತರ ಜಾಮೀನು ಮತ್ತು ಸಿಆರ್‍ಪಿಸಿ ಸೆಕ್ಷನ್ 91ರ ಅಡಿ ವಿನಾಯಿತಿ ಕೇಳಿ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಪ್ರಕರಣವನ್ನು ಬಯಲಿಗೆ ತಂದ […]