ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ

ಬೆಂಗಳೂರು,ನ.4- ಅಭ್ಯರ್ಥಿಗಳ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‍ಸಿ/ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 […]