ಪೊಲೀಸರಿಂದಲೇ ಡ್ರಗ್ಸ್ ಮಾರಾಟ ಪ್ರಕರಣ, ಸಿಸಿಬಿಯಿಂದ ತನಿಖೆ

ಬೆಂಗಳೂರು, ಜ.20- ಮುಖ್ಯಮಂತ್ರಿ ನಿವಾಸದ ಸಮೀಪ ಇಬ್ಬರು ಕಾನ್ಸ್ಟೆಬಲ್ಗಳು ಗಾಂಜಾ ಮಾರಾಟ ಯತ್ನ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಿಲ್ಲ ಎಂದು ನಗರ ಪೊಲೀಸ್ ಆಯುಕ್ತರು ಮುಂದಿನ ತನಿಖೆಗಾಗಿ ಸಿಸಿಬಿಗೆ ವಹಿಸಿದ್ದಾರೆ. ಸಿಎಂ ಮನೆ ಮುಂದೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಕೋರಮಂಗಲ ಪೊಲೀಸ್ ಠಾಣೆ ಕಾನ್ಸ್ಟೆಬಲ್ಗಳಾದ ಸಂತೋಷ್ ಮತ್ತು ಶಿವಕುಮಾರ್ ಕರ್ತವ್ಯ ದುರುಪಯೋಗಪಡಿಸಿಕೊಂಡು 80 ಅಡಿ ರಸ್ತೆಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದರು. ಆಗ ಸುದ್ದಿ ತಿಳಿದ ಆರ್ಟಿ ನಗರ ಠಾಣೆ ಪೊಲೀಸರು ಇವರಿಬ್ಬರು ಸೇರಿದಂತೆ ಐದು ಮಂದಿಯನ್ನು ಬಂಧಿಸಿದ್ದರು. ಬಂಧಿತರು […]