ವಿಚಾರಣೆ ನೆಪದಲ್ಲಿ ಬಿಬಿಎಂಪಿ ಅಧಿಕಾರಿಗಳಿಗೆ ಪೊಲೀಸರ ಕಿರುಕುಳ

ಬೆಂಗಳೂರು,ನ.28- ಮತದಾರರ ವೈಯಕ್ತಿಕ ಮಾಹಿತಿ ಕಳುವು ಪ್ರಕರಣದ ನೆಪದಲ್ಲಿ ಬಿಬಿಎಂಪಿ ಅಧಿಕಾರಿಗಳಿಗೆ ಪೊಲೀಸರು ನೀಡುತ್ತಿರುವ ಚಿತ್ರಹಿಂಸೆ ಹಾಗೂ ಕಿರುಕುಳ ತಪ್ಪಿಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳುಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ. ಚಿಲುಮೆ ಸಂಸ್ಥೆ ನಡೆಸಿರುವ ಕರ್ಮಕಾಂಡದಿಂದಾಗಿ ಪೊಲೀಸರು ಕಂದಾಯಾಕಾರಿಗಳು ಹಾಗೂ ಸಹ ಕಂದಾಯ ಅಧಿಕಾರಿಗಳನ್ನು ಕರೆದು ಮನಬಂದಂತೆ ವಿಚಾರಣೆ ನಡೆಸುತ್ತಿರುವುದರಿಂದ ನಮ್ಮ ಸಿಬ್ಬಂದಿಗಳು ಖಿನ್ನತೆಗೆ ಒಳಗಾಗಿದ್ದಾರೆ. ಹೀಗಾಗಿ ವಿಚಾರಣೆ ಸಂದರ್ಭದಲ್ಲಿ ನಮ್ಮ ಅಧಿಕಾರಿಗಳಿಗೆ ಚಿತ್ರಹಿಂಸೆ ನೀಡುವುದನ್ನು ನಿಲ್ಲಿಸಬೇಕು ಎಂದು ಸಂಘದ ಅಧ್ಯಕ್ಷ ಅಮೃತ್ರಾಜ್ ಅವರು ಚುನಾವಣಾ ಆಯೋಗಕ್ಕೆ […]