ಸ್ಯಾಂಟ್ರೋ ರವಿ ಜೊತೆ ಪೊಲೀಸರು ಶಾಮೀಲಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ಜ್ಞಾನೇಂದ್ರ ಎಚ್ಚರಿಕೆ

ಬೆಂಗಳೂರು,ಜ.11- ರೌಡಿಶೀಟರ್ ಹಿನ್ನಲೆಯ ಸ್ಯಾಂಟ್ರೊ ರವಿ ಜೊತೆ ಪೊಲೀಸ್ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವುದು ತನಿಖೆಯಲ್ಲಿ ಕಂಡುಬಂದರೆ ಅಂಥವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೊ ರವಿ ಜೊತೆ ನಮ್ಮ ಇಲಾಖೆಯ ಯಾವುದೇ ಅಧಿಕಾರಿಗಳು ಕಾನೂನು ಬಾಹಿರವಾಗಿ ಅಪರಾಧ ಚಟುವಟಿಕೆಗಳನ್ನು ನಡೆಸಲು ಕುಮ್ಮಕ್ಕು ಕೊಟ್ಟಿದ್ದರೆ ಕಂಡಿತವಾಗಿಯೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಯಾರನ್ನೂ ಕೂಡ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಉತ್ತರಿಸಿದರು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈಗಾಗಲೇ […]