ತಾರಕಕ್ಕೇರಿದ ಹಿಜಾಬ್ ವಿವಾದ : ಕೆಲವು ಕಡೆ ಕಲ್ಲು ತೂರಾಟ, ಲಾಠಿಚಾರ್ಜ್

ಬೆಂಗಳೂರು,ಫೆ.8- ಈವರೆಗೂ ಕೇವಲ ಮಾತಿನ ಚಕಮಕಿಗೆ ಮಾತ್ರ ಸೀಮಿತವಾಗಿದ್ದ ಹಿಜಾಬ್ ಹಾಗೂ ಕೇಸರಿಶಾಲು ವಿವಾದ ಈಗ ತೀವ್ರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದ್ದು, ಕೆಲವು ಕಡೆ ಕಲ್ಲು ತೂರಾಟ, ಪೊಲೀಸರ ಲಾಠಿಚಾರ್ಜ್ ಹಾಗೂ ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ ಬಾಪೂಜಿನಗರದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೇಸರಿ ಹಾಗೂ ಹಿಜಾಬ್ ಧರಿಸಿದ್ದ ವಿದ್ಯಾರ್ಥಿಗಳ ನಡುವೆ ತಳ್ಳಾಟ, ನೂಕಾಟ, ಮಾತಿನ ಚಕಮಕಿ ನಡೆದು ಕಲ್ಲು ತೂರಾಟವೂ ಸಹ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ತಲೆಗೆ ಪೆಟ್ಟು ಬಿದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಸ್ಥಳದಲ್ಲಿದ್ದ […]