ಚಾಮರಾಜಪೇಟೆ ಮೈದಾನಕ್ಕೆ ಪೊಲೀಸ್ ಸರ್ಪಗಾವಲು

ಬೆಂಗಳೂರು,ಆ.14: ಪ್ರಥಮ ಬಾರಿಗೆ ಧ್ವಜಾರೋಹಣ ನೆರವೇರಿಸುತ್ತಿರುವ ಚಾಮರಾಜಪೇಟೆ ಆಟದ ಮೈದಾನಕ್ಕೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ಅಧಿಕಾರಿಗಳು ಸೇರಿದಂತೆ ಒಟ್ಟು 800 ಮಂದಿಯನ್ನು ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿದ್ದು, ಎರಡು ಆರ್‍ಎಎಫ್ ತುಕಡಿಗಳು, 100 ಮಂದಿ ಕಮಾಂಡೋಗಳು, 400 ಮಂದಿ ಸಿವಿಲ್ ಪೊಲೀಸರು, 8 ತುಕಡಿ ಕೆಎಸ್‍ಆರ್‍ಪಿ, ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಪಶ್ಚಿಮ ವಿಭಾಗದ ಡಿಸಿಪಿ ಲಕ್ಷಣ್ ನಿಂಬರಗಿ ಅವರು ಬಂದೋಬಸ್ತ್ ನೇತೃತ್ವ ವಹಿಸಿದ್ದು, ನಾಳೆ ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಲಿದೆ.400ಕ್ಕೂ ಹೆಚ್ಚು ಪೊಲೀಸರು ಆಟದ ಮೈದಾನದ ಸುತ್ತಮುತ್ತಲಿನ ಪ್ರದೇಶಗಳಾದ […]