ಒಳ ಏಟಿನ ಭೀತಿ : ಹೆಚ್ಚುವರಿ ಕ್ಷೇತ್ರಕ್ಕಾಗಿ ಸಿಎಂ ಸೇರಿದಂತೆ ಪ್ರಭಾವಿಗಳ ತಡಕಾಟ

ಬೆಂಗಳೂರು,ಜ.28- ಮುಂಬರುವ ವಿಧಾನಸಭೆ ಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸಿ ಮತದಾರರ ಓಲೈಕೆಗೆ ನಾನಾ ರೀತಿಯ ಸರ್ಕಸ್ ನಡೆಸುತ್ತಿರುವಾಗಲೇ ಕೆಲವರು ಸುರಕ್ಷಿತ ಕ್ಷೇತ್ರಗಳ ಶೋಧದಲ್ಲಿ ತಲ್ಲೀನರಾಗಿದ್ದಾರೆ. ತವರು ಕ್ಷೇತ್ರದಲ್ಲಿ ಕೆಲವರಿಗೆ ಗೆಲ್ಲುವ ಅತಿಯಾದ ಆತ್ಮವಿಶ್ವಾಸವಿದ್ದರೆ ಇನ್ನು ಕೆಲವರಿಗೆ ಒಳ ಹೊಡೆತದ ಭೀತಿ ಇರುವುದರಿಂದ ಹೆಚ್ಚುವರಿಯಾಗಿ ಇನ್ನೊಂದು ಕ್ಷೇತ್ರದಲ್ಲಿ ಸರ್ಧೆ ಗೆಲ್ಲುವ ತವಕದಲ್ಲಿದ್ದಾರೆ. ಆಡಳಿತಾರೂಢ ಬಿಜೆಪಿ,ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ನೇತಾರರೇ ಈ ಬಾರಿ ಸುರಕ್ಷಿತ ಕ್ಷೇತ್ರಗಳಲ್ಲಿ ತಮ್ಮ ರಾಜಕೀಯ ಭವಿಷ್ಯರೂಪಿಸಿಕೊಳ್ಳಲು […]